ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾಖಲಾದ ಕೆಲವೇ ಗಂಟೆಗಳಲ್ಲಿ ಆಸ್ಪತ್ರೆಯಿಂದ ಸಿಎಂ ಡಿಸ್ಚಾರ್ಜ್

ಬೆಂಗಳೂರು : ಮಂಡಿನೋವು ಹಿನ್ನಲೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಸಿದ್ದರಾಮಯ್ಯ ಚಿಕಿತ್ಸೆಯ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ತೀವ್ರವಾದ ಮಂಡಿನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾನುವಾರ ಖಾಸಗಿ ಆಸ್ಪತ್ರೆಗೆ ದಾಖಲಾಗಿತ್ತು, ಈ ಹಿಂದೆ ಲೆಗಮೆಂಟ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಇದೀಗ ಅದೇ ಜಾಗದಲ್ಲಿ ಒತ್ತಡ ಬಿದ್ದಿರುವುದರಿಂದ ನೋವು ಹೆಚ್ಚಾಗಿದೆ.

ಇದೀಗ ತಪಾಸಣೆ ನಡೆಸಿದ ವೈದ್ಯರು ಯಾವುದೇ ತೊಂದರೆಯಿಲ್ಲ ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ತಿಳಿಸಿದ್ದಾರೆ. ಈ ಹಿನ್ನಲೆ ಇಂದೇ ಡಿಸ್ಚಾರ್ಜ್ ಮಾಡಿದ್ದಾರೆ. ಸಿಎಂ ಆಸ್ಪತ್ರೆಗೆ ದಾಖಲಾದ ಹಿನ್ನಲೆ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಪಡಿಸಲಾಗಿದೆ.

Edited By : Nirmala Aralikatti
PublicNext

PublicNext

02/02/2025 01:41 pm

Cinque Terre

47.02 K

Cinque Terre

6

ಸಂಬಂಧಿತ ಸುದ್ದಿ