", "articleSection": "Cultural Activity", "image": { "@type": "ImageObject", "url": "https://prod.cdn.publicnext.com/s3fs-public/405356-1738491287-shala.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Suresh Gadag" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿರಹಟ್ಟಿ : ಪಾಠ ಹೇಳಿ, ಜ್ಞಾನಾರ್ಜನೆ ಮಾಡಿಸಿ ಬದುಕಿಗೆ ಬೆಳಕಾದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಎಂದಿಗೂ ಮರೆಯಬಾರದು ಎಂದು ಶರಣ ಸಾಹಿತ್ಯ ಪರಿಷತ...Read more" } ", "keywords": "Primary School Teachers, Importance of Teachers, Role of Teachers, Education System, Karnataka Education, Teacher Appreciation, Primary Education, School Teachers, Teaching Community, Baligeer,Gadag,Cultural-Activity", "url": "https://publicnext.com/node" } ಪ್ರಾಥಮಿಕ ಶಾಲಾ ಶಿಕ್ಷಕರನ್ನು ಎಂದಿಗೂ ಮರೆಯಬಾರದು : ಬಳಿಗೇರ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಾಥಮಿಕ ಶಾಲಾ ಶಿಕ್ಷಕರನ್ನು ಎಂದಿಗೂ ಮರೆಯಬಾರದು : ಬಳಿಗೇರ

ಶಿರಹಟ್ಟಿ : ಪಾಠ ಹೇಳಿ, ಜ್ಞಾನಾರ್ಜನೆ ಮಾಡಿಸಿ ಬದುಕಿಗೆ ಬೆಳಕಾದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಎಂದಿಗೂ ಮರೆಯಬಾರದು ಎಂದು ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎ.ಬಳಿಗೇರ ಹೇಳಿದರು.

ಅವರು ಪಟ್ಟಣದ 2008-2011ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಸಹಪಾಠಿ ಸ್ನೇಹಿತರ ಬಳಗದಿಂದ ಶ್ರೀ.ಸಿ.ಸಿ.ಎನ್.ಪ್ರೌಢ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗುರುಗಳ ಸೇವೆಯನ್ನು ಸ್ಮರಿಸುವುದು ಮತ್ತು ಅವರಿಗೆ ಪ್ರತ್ಯಕ್ಷವಾಗಿ ಧನ್ಯತೆ ಸಮರ್ಪಣೆ ಮಾಡುವುದು ಸಾರ್ಥಕ ಕಾರ್ಯ ಇದೇ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಹಳೆಯ ವಿದ್ಯಾರ್ಥಿಗಳು 15 ವರ್ಷದ ನಂತರ ಒಂದೆಡೆ ಸೇರಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.

ನಂತರ ಮಾತನಾಡಿದ ನಿವೃತ್ತ ಶಿಕ್ಷಕ ವಿ.ಎಸ್.ಶಟವಾಜಿ ಮಾತನಾಡಿ, ಪಾಠ ಮಾಡಿದ ಗುರುಗಳು ಯಾವುದೇ ಅಪೇಕ್ಷೆ ಇಲ್ಲದೆ ಶಿಷ್ಯರ ಭವಿಷ್ಯ ರೂಪಿಸುತ್ತಾರೆ. ಜೀವನಕ್ಕೆ ಮಾರ್ಗದರ್ಶಕರಾಗುತ್ತಾರೆ. ಆದರೆ ಇಂದಿನ ಶಿಕ್ಷಣ ಪದ್ಧತಿ ಸಾಕಷ್ಟು ಬದಲಾಗಿದೆ. ಮಕ್ಕಳಿಗೆ ದಂಡಿಸದೆ, ಶಿಕ್ಷಿಸದೆ ಪಾಠ ಮಾಡಬೇಕು ಎಂದು ಪಾಲಕರೇ ತಾಕೀತು ಮಾಡುತ್ತಾರೆ. ಇದು ಬೇಸರದ ಸಂಗತಿ ಎಂದು ಅವರು ಹೇಳಿದರು.

Edited By : Vinayak Patil
Kshetra Samachara

Kshetra Samachara

02/02/2025 03:45 pm

Cinque Terre

14.72 K

Cinque Terre

0

ಸಂಬಂಧಿತ ಸುದ್ದಿ