ಕೋಲಾರ : ಸೆಕೆಂಡ್ ಹ್ಯಾಂಡ್ ಗೃಹೋಪಯೋಗಿ ಮಳಿಗೆ ಶೆಡ್ ಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮರದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ನಗರದ ಕಾರಂಜಿ ಕಟ್ಟೆ ಬಳಿಯ ರಾಜಾ ನಗರದಲ್ಲಿ ಈ ಒಂದು ಘಟನೆಯಾಗಿದೆ.
ನೂತನವಾಗಿ ಸೆಕೆಂಡ್ ಹ್ಯಾಂಡ್ ಗೃಹೋಪಯೋಗಿ ವಸ್ತುಗಳ ದಾಸ್ತಾನು ಶೆಡ್ ನ್ನು ನಿರ್ಮಿಸಲಾಗಿತ್ತು. ಆಕಸ್ಮಿಕ ಅಗ್ನಿ ಅವಘಡದಿಂದ ಶೆಡ್ ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮರದ ವಸ್ತುಗಳು ಸುಟ್ಟು ಕರಕಲಾಗಿದ್ದು, ಶೆಡ್ ನಲ್ಲಿದ್ದ ಕಾರ್ಮಿಕರು ಪಾರಾಗಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಕೋಲಾರ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ರಮೇಶ್ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ.ಕೊಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
02/02/2025 06:10 pm