ವಿಜಯಪುರ: ರಾಜ್ಯದಲ್ಲಿ ರಾಜಕಾರಣ ಗಬ್ಬೆದ್ದು ಹೋಗಿದೆ ತಾನು ರಾಜಕೀಯ ಪಕ್ಷದ ಕಾರ್ಯಕರ್ತ ಎಂದು ಹೇಳಿಕೊಳ್ಳಲು ಕಾರ್ಯಕರ್ತರು ನಾಚಿಕೆ ಪಡುವ ಹಾಗೆ ಆಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅಸಮಾಧಾನ, ವಿಷಾದ ವ್ಯಕ್ತಪಡಿಸಿದರು.
ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅನೇಕ ಹಿರಿಯರು ಕಟ್ಟಿದ ಬಿಜೆಪಿ ಪಕ್ಷದ ಪರಿಸ್ಥಿತಿ ಹೇಳತೀರದಾಗಿದೆ.
ಈಗ ಬಿಜೆಪಿ ಪಕ್ಷಕ್ಕೆ ಸಿದ್ಧಾಂತವೇ ಇಲ್ಲದಂತಾಗಿದೆ. ಸಾಮೂಹಿಕ ನೇತೃತ್ವ ಪಕ್ಷದಲ್ಲಿ ಉಳಿದಿಲ್ಲ, ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಕ್ಕಿದೆ ಎಂದರು.
-ಮಂಜು ಕಲಾಲ, ಪಬ್ಲಿಕ್ ನೆಕ್ಸ್ಟ್ ವಿಜಯಪುರ
PublicNext
02/02/2025 07:34 pm