", "articleSection": "Cultural Activity", "image": { "@type": "ImageObject", "url": "https://prod.cdn.publicnext.com/s3fs-public/40083620250203015409filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshChikkamangaluru" }, "editor": { "@type": "Person", "name": "9731141698" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ: ಜಿಲ್ಲೆಯಲ್ಲಿ ಅಸಂಘಟಿತರಾಗಿರುವ ಶಿಳ್ಳೇಕ್ಯಾತ ಸಮುದಾಯದ ವಿಕಾಸಕ್ಕೆ ಸರ್ಕಾರದ ವಿವಿಧ ಇಲಾಖೆಗಳಿಂದ ಅನುಷ್ಠಾನಗೊಳಿಸಲಾದ ಯೋಜನೆಗಳಲ್ಲಿ...Read more" } ", "keywords": "Node,Shimoga,News,Cultural-Activity", "url": "https://publicnext.com/node" } ಶಿವಮೊಗ್ಗ: ಯೋಜನೆಗಳ ಲಾಭ ಪಡೆದುಕೊಳ್ಳಲು ಶಿಳ್ಳೇಕ್ಯಾತ ಯುವಕರಿಗೆ ಸೂಚನೆ - ಜಿ.ಪಲ್ಲವಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಯೋಜನೆಗಳ ಲಾಭ ಪಡೆದುಕೊಳ್ಳಲು ಶಿಳ್ಳೇಕ್ಯಾತ ಯುವಕರಿಗೆ ಸೂಚನೆ - ಜಿ.ಪಲ್ಲವಿ

ಶಿವಮೊಗ್ಗ: ಜಿಲ್ಲೆಯಲ್ಲಿ ಅಸಂಘಟಿತರಾಗಿರುವ ಶಿಳ್ಳೇಕ್ಯಾತ ಸಮುದಾಯದ ವಿಕಾಸಕ್ಕೆ ಸರ್ಕಾರದ ವಿವಿಧ ಇಲಾಖೆಗಳಿಂದ ಅನುಷ್ಠಾನಗೊಳಿಸಲಾದ ಯೋಜನೆಗಳಲ್ಲಿ ಸೌಲಭ್ಯವನ್ನು ಒದಗಿಸಿಕೊಟ್ಟು, ಸಾಮಾಜಿಕವಾಗಿ ಮುಖ್ಯವಾಹಿನಿಗೆ ಕರೆತರುವಲ್ಲಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸುವಂತೆ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ವರ್ಗ ಅಲೆಮಾರಿಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಹೇಳಿದರು.

ಶಿವಮೊಗ್ಗ ಸಮೀಪದ ಗೋಂದಿ ಚಟ್ನಳ್ಳಿ ಗ್ರಾಮದ ಶಿಳ್ಳೇಕ್ಯಾತ ಸಮುದಾಯದ ನಿವಾಸಿಗಳ ಬೀದಿಗೆ ಭೇಟಿ ನೀಡಿ, ಅಲ್ಲಿನ ಬೀದಿ ದೀಪ, ಚರಂಡಿ, ಕುಡಿಯುವ ನೀರು, ಸ್ವಚ್ಛತೆ, ನೈರ್ಮಲ್ಯ ಮುಂತಾದ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನು ಪರಿಶೀಲಿಸಿದ ನಂತರ ಅಲ್ಲಿನ ನಿವಾಸಿಗಳಿಂದ ಅಹವಾಲುಗಳನ್ನು ಸ್ವೀಕರಿಸಿದರು.

ಇದೇ ಸಂದರ್ಭದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿಳ್ಳೇಕ್ಯಾತ ಜನಾಂಗವು ಪರಿಶಿಷ್ಟ ಜಾತಿಗೆ ಸೇರಿದ್ದು, ಜೀವನೋಪಾಯಕ್ಕಾಗಿ ಎಲ್ಲೆಂದರಲ್ಲಿ ಚದುರಿ ಹೋಗಿ, ಜೀವನ ನಿರ್ವಹಣೆಗಾಗಿ, ನೆಮ್ಮದಿಯ ಬದುಕಿಗಾಗಿ ಅಲೆದಾಡುತ್ತಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದ ಅವರು ಸ್ವಾತಂತ್ರ್ಯ ನಂತರ ಹಲವು ದಶಕಗಳು ಉರುಳಿದರೂ ಕನಿಷ್ಟ ಜೀವನ ನಿರ್ವಹಿಸುತ್ತಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ ಎಂದರು.

ಅತ್ಯಂತ ಹಿಂದುಳಿದಿರುವ, ಶಿಕ್ಷಣದಿಂದ ದೂರವೇ ಇರುವ, ಜೀವನೋಪಾಯಕ್ಕಾಗಿ ಮೀನುಗಾರಿಕೆಯನ್ನು ಅವಲಂಬಿಸಿರುವ ಈ ಜನಾಂಗದವರಿಗೆ, ಅವರ ನೆಲೆಸಿರುವ ಬೀದಿಗಳಿಗೆ ಶುದ್ಧ ಕುಡಿಯುವ ನೀರು, ಸೂರು, ಶಾಲೆ, ವಿದ್ಯುತ್ಸಂಪರ್ಕ, ನೀರು-ನೈರ್ಮಲ್ಯ ಮತ್ತಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ಸ್ವಚ್ಛತೆಗೆ ಗಮನಹರಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪ್ರಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು.

Edited By : PublicNext Desk
PublicNext

PublicNext

03/02/2025 01:54 pm

Cinque Terre

6.84 K

Cinque Terre

0

ಸಂಬಂಧಿತ ಸುದ್ದಿ