", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/34014720250203030420filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Shashikumar Hassan" }, "editor": { "@type": "Person", "name": "9743515832" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಸಕಲೇಶಪುರ :ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಲಾರಿ ಉರುಳಿ ಬಿದ್ದು ಲಾರಿ ಚಾಲಕ ಹಾಗೂ ನಿರ್ವಾಹಕ ಗಾಯಗೊಂಡಿರುವ ಘಟನೆ ತಾಲೂಕಿನ,...Read more" } ", "keywords": "Node,Hassan,Public-News", "url": "https://publicnext.com/node" }
ಸಕಲೇಶಪುರ :ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಲಾರಿ ಉರುಳಿ ಬಿದ್ದು ಲಾರಿ ಚಾಲಕ ಹಾಗೂ ನಿರ್ವಾಹಕ ಗಾಯಗೊಂಡಿರುವ ಘಟನೆ ತಾಲೂಕಿನ, ಮಾರನಹಳ್ಳಿ ಗಡಿ ಕ್ರಾಸ್ ಬಳಿ ನಡೆದಿದೆ.ಮಂಗಳೂರಿನಿಂದ-ಬೆಂಗಳೂರು ಕಡೆಗೆ ಸಿಮೆಂಟ್ ಶೀಟ್‌ಗಳನ್ನು ತುಂಬಿಕೊಂಡು ತೆರಳುತ್ತಿದ್ದ ಲಾರಿ ಮಾರನಹಳ್ಳಿ ಗಡಿಯಲ್ಲಿರುವ ತಿರುವಿನಲ್ಲಿ ಹಳ್ಳಕ್ಕೆ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಚಾಲಕ ಹಾಗೂ ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳಿಗೆ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ತಡೆಗೋಡೆ ಇಲ್ಲದ ಕಾರಣ ಪದೇ ಪದೇ ಇದೇ ತಿರುವಿನಲ್ಲಿ ನಿಯಂತ್ರಣ ಸಿಗದೆ ಹಳ್ಳಕ್ಕೆ ವಾಹನಗಳು ಬೀಳುತ್ತಿದ್ದು ತಡೆಗೋಡೆ ನಿರ್ಮಿಸುವಂತೆ ಹಲವು ಬಾರಿ ಮನವಿ ಮಾಡಿದ್ದರು ತಡೆಗೋಡೆ ನಿರ್ಮಿಸಿದೆ ಬೇಜವಾಬ್ದಾರಿ ತೋರಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Kshetra Samachara
03/02/2025 03:04 pm