ಬೆಂಗಳೂರು: ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಒಣಹವೆ ಇರಲಿದೆ. ಜನರಿಗೆ ಎಚ್ಚರವಾಗಿರುವಂತೆ ಹವಾಮಾನ ಇಲಾಖೆ ಸೂಚನೆ ಕೊಟ್ಟಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಕನಿಷ್ಠ ಉಷ್ಣಾಂಶ 14-16 ಡಿ.ಸೆ. ಇರಲಿದೆ. ಗರಿಷ್ಠ ಉಷ್ಣಾಂಶ 31-33 ಡಿ.ಸೆ. ಇರುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಗರಿಷ್ಠ ಉಷ್ಣಾಂಶ 33-35 ಡಿ.ಸೆ. ಇರಲಿದ್ದು, ಕನಿಷ್ಠ ಉಷ್ಣಾಂಶ 14-16 ಡಿ.ಸೆ. ಇರಲಿದೆ. ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 33-35 ಡಿ.ಸೆ. ಇರಲಿದ್ದು, ಕನಿಷ್ಠ ಉಷ್ಣಾಂಶ 21-23 ಡಿ.ಸೆ. ಇರಲಿದೆ.
PublicNext
03/02/2025 03:54 pm