ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಹೆಚ್‌ಡಿಕೆ ವಿರುದ್ಧ ತನಿಖೆಗೆ ಎಸ್ಐಟಿ ರಚನೆ ಸ್ವಾಗತಾರ್ಹ - ಎಸ್.ಆರ್.ಹಿರೇಮಠ

ಹುಬ್ಬಳ್ಳಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಕುಟುಂಬ‌ ಸದಸ್ಯರ ವಿರುದ್ಧ ಕೇಳಿ ಬಂದಿರುವ ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದ ಸರ್ಕಾರಿ ಜಮೀನು ಕಬಳಿಸಿದ್ದಾರೆ ಎಂಬ ಆರೋಪದ ತನಿಖೆ ನಡೆಸಲು ರಾಜ್ಯ ಸರ್ಕಾರ ಹಿರಿಯ ಐಎಎಸ್ ಅಧಿಕಾರಿ ಅಮಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಿದ್ದನ್ನು ಸಾಮಾಜಿಕ ಹೋರಾಟಗಾರ ಎಸ್ ಆರ್ ಹಿರೇಮಠ ಸ್ವಾಗತ ಮಾಡಿದರು.

ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ-2011ರ ಅಡಿಯಲ್ಲಿ ಎಸ್ಐಟಿ ರಚನೆ ಮಾಡಲಾಗಿದ್ದು ಒಳ್ಳೆಯ ವಿಚಾರ. ಈ ಕುರಿತು ನಾನೇ ಹೆಚ್ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬದವರು ಕೇತಗಾನಹಳ್ಳಿಯಲ್ಲಿ ಸರ್ವೆ ನಂ. 8,9,10, 16, 17 ಮತ್ತು 79ರಲ್ಲಿನ ಜಮೀನುಗಳನ್ನು ಕಬಳಿಸಿದ್ದಾರೆ ಎಂದು ಆರೋಪಿಸಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದೆ ಎಂದರು.

ಈ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶ ಪಾಲಿಸಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಯನ್ನೂ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಇದರ ಬೆನ್ನಲ್ಲೇ ಸರ್ಕಾರ ಎಸ್ಐಟಿ ರಚನೆ ಮಾಡಿದೆ ಎಂದು ಅವರು ಹೇಳಿದರು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

03/02/2025 04:12 pm

Cinque Terre

66.37 K

Cinque Terre

3

ಸಂಬಂಧಿತ ಸುದ್ದಿ