", "articleSection": "Politics,Infrastructure,Health & Fitness,Public News", "image": { "@type": "ImageObject", "url": "https://prod.cdn.publicnext.com/s3fs-public/421698-1738582945-A5~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗದಗ: ಜಿಮ್ಸ್ ಆಸ್ಪತ್ರೆ ಸೇವೆಯಲ್ಲಿ ಶ್ರೇಷ್ಠ ಆಸ್ಪತ್ರೆ ಆಗಲಿ. ಇಲ್ಲಿ ಅತ್ಯುನ್ನತ ಸೇವೆಗಳು ಸರಳವಾಗಿ ಸಿಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹ...Read more" } ", "keywords": ",Gadag,Politics,Infrastructure,Health-and-Fitness,Public-News", "url": "https://publicnext.com/node" }
ಗದಗ: ಜಿಮ್ಸ್ ಆಸ್ಪತ್ರೆ ಸೇವೆಯಲ್ಲಿ ಶ್ರೇಷ್ಠ ಆಸ್ಪತ್ರೆ ಆಗಲಿ. ಇಲ್ಲಿ ಅತ್ಯುನ್ನತ ಸೇವೆಗಳು ಸರಳವಾಗಿ ಸಿಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ.ಪಾಟೀಲ ಹೇಳಿದರು.
ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆ ಆವರಣದಲ್ಲಿ ಸೋಮವಾರ ವೈದ್ಯಕೀಯ ಶಿಕ್ಷಣ ಇಲಾಖೆ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವತಿಯಿಂದ ನೂತನ ಕ್ಯಾಥಲ್ಯಾಬ್ ಸೌಲಭ್ಯದೊಂದಿಗೆ ಸೂಪರ್ ಸ್ಪೆಷಾಲಿಟಿ ಹೃದ್ರೋಗ ಚಿಕಿತ್ಸಾ ಘಟಕದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಜಿಮ್ಸ್ ಆರಂಬವಾಗಿ 10 ವರ್ಷ ಪೂರ್ಣಗೊಳಿಸಿದೆ. ಆದರೇ ಇಲ್ಲಿ ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಮಹತ್ವದ ಸಾಧನೆ ಮಾಡಿದ್ದೇವೆ. 185 ಕೋಟಿ ಕಾಲೇಜು ಕಟ್ಟಡ ನಿರ್ಮಾಣ ಆಗಿದೆ. ಒಟ್ಟಾರೆ ೩೬೬ ಕೋಟಿ ಖರ್ಚು ಮಾಡಿದ್ದೇವೆ. 10 ಕೋಟಿ ವೆಚ್ಚದಲ್ಲಿ ಕ್ಯಾಥ್ ಲ್ಯಾಬ್ ಮಾಡಿದ್ದು, ಬಡವರಿಗೆ ಹೆಚ್ಚು ಅನುಕೂಲ ಆಗಲಿ ಎಂದರು.
ಗದಗನಲ್ಲಿ ಮಾನವ ಸಂಪನ್ಮೂಲ ಸಕಾಲಕ್ಕೆ ಸೇವೆ ಒದಗಿಸಲು ಮುಂದಾಗಬೇಕು. ನಾವು ಇಲ್ಲಿಂದ ಜಯದೇವ ಆಸ್ಪತ್ರೆ ಗೆ ಚಿಕಿತ್ಸೆ ಗೆ ಗದಗ ಜನರನ್ನು ಕರೆದುಕೊಂಡು ಹೋಗಿ ಬಂದಿದ್ದೇವೆ. ಅಲ್ಲಿನ ಮಾನವೀಯ ಸೇವೆ ಗೌರವ ಇಲ್ಲಿನ ಜಿಮ್ಸ್ ನಲ್ಲಿ ಲಭ್ಯವಾಗಬೇಕು ಎಂದು ಜಿಮ್ಸ್ ನಿರ್ದೇಶಕ ರಿಗೆ ಸೂಚನೆ ನೀಡಿದರು. ಇಲ್ಲಿ ಬರುವವರಿಗೆ ಸಕಾಲದಲ್ಲಿ ಸೇವೆ ನೀಡಬೇಕು. ಬರುವರಿಗೆ ಗೌರವ, ಉತ್ತಮ ಗುಣಮಟ್ಟದ ಚಿಕಿತ್ಸೆ ಹಾಗೂ ಸೇವೆ ದೊರೆಯಲಿ ಎಂದು ಹೇಳಿದರು.
Kshetra Samachara
03/02/2025 05:12 pm