", "articleSection": "Infrastructure,Cultural Activity,Education,Government,News,Public News", "image": { "@type": "ImageObject", "url": "https://prod.cdn.publicnext.com/s3fs-public/421698-1738583072-A6~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshShimogga" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಫೆಬ್ರವರಿ 06 ಮತ್ತು 07ರ ಗುರುವಾರ ಮತ್ತು ಶುಕ್ರವಾರ ಎರಡು ದಿನಗಳ ಕಾಲ ಗೋಪಿಶೆಟ್ಟಿಕ...Read more" } ", "keywords": ",Shimoga,Infrastructure,Cultural-Activity,Education,Government,News,Public-News", "url": "https://publicnext.com/node" }
ಶಿವಮೊಗ್ಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಫೆಬ್ರವರಿ 06 ಮತ್ತು 07ರ ಗುರುವಾರ ಮತ್ತು ಶುಕ್ರವಾರ ಎರಡು ದಿನಗಳ ಕಾಲ ಗೋಪಿಶೆಟ್ಟಿಕೊಪ್ಪದ ಸಾಹಿತ್ಯ ಗ್ರಾಮದಲ್ಲಿ ಜಿಲ್ಲಾ 19ನೇ ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಡಿ.ಮಂಜುನಾಥ ತಿಳಿಸಿದರು.
ನಗರದಲ್ಲಿ ಸುದ್ದಿ ಗೋಷ್ಟಿ ನಡೆಸಿ ಮಾತನಾಡಿದ ಅವರು ತೀರ್ಥಹಳ್ಳಿ ತಾಲ್ಲೂಕಿನ ಹಿರಿಯ ಸಾಹಿತಿ ಡಾ.ಜೆ.ಕೆ.ರಮೇಶ್ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ. ಮಹಾವೇದಿಕೆಗೆ ಡಾ.ನಾ.ಡಿಸೋಜ ಅವರ ಸುಮಾರು 4 ಸಾವಿರ ಪ್ರತಿನಿಧಿಗಳು ಸಾಹಿತ್ಯ ಸಮ್ಮೇಳನಕ್ಕೆನೋಂದಣಿಯಾಗಿದ್ದು, ಎರಡು ದಿನಗಳ ಊಟೋಪಚಾರದ ಜೊತೆಗೆ ಓಓಡಿ ಸೌಲಭ್ಯ ನೀಡಲಾಗುತ್ತಿದೆ.
ಎರಡು ದಿನಗಳಲ್ಲಿ 10 ಕ್ಕು ಹೆಚ್ಚು ಗೋಷ್ಟಿಗಳು ನಡೆಯಲಿದ್ದು, ನಾಡಿನ ಪ್ರಸಿದ್ದ ಸಾಹಿತಿಗಳು, ಚಲನಚಿತ್ರ ನಟರು ಭಾಗವಹಿಸಲಿದ್ದಾರೆ. ಪುಸ್ತಕ ಮಾರಟ ಮಳಿಗೆಗಳ ಜೊತೆಯಲ್ಲಿ ವಿಭಿನ್ನ ಬಗೆಯ 25 ಕ್ಕು ಹೆಚ್ಚು ಮಳಿಗೆಗಳಿಗೆ ಅವಕಾಶ ನೀಡಲಾಗಿದೆ. ಶಿಕ್ಷಕಿ ಮೇರಿ ಡಿಸೋಜ ಸಂಗ್ರಹಿಸಿರುವ ಅಮೂಲ್ಯ ನಾಣ್ಯಗಳು ಹಾಗೂ ಶಿವಮೊಗ್ಗ ನಾಗರಾಜ ಅವರ ಸೆರೆ ಹಿಡಿದಿರುವ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ ಎಂದರು.
PublicNext
03/02/2025 05:14 pm