ತುಮಕೂರು: ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಯುವಕ ರೈಲಿನಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ತುಮಕೂರು ರೈಲ್ವೆ ನಿಲ್ದಾಣದ ನಡೆದಿದೆ.
ಬೆಂಗಳೂರಿನಿಂದ ತುಮಕೂರಿಗೆ ಬರುತ್ತಿದ್ದ ಯುವಕ ಛಾಯಾಂಕ್ (24) ಮೃತಪಟ್ಟ ಯುವಕ. ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಅಮ್ಮಸಂದ್ರ ಗ್ರಾಮದ ಯುವಕ ಪುಷ್ಪಕ್ ಎಕ್ಸ್’ಪ್ರೆಸ್ ರೈಲಿನಲ್ಲಿ ಆಗಮಿಸಿದ್ದು, ರೈಲಿನಿಂದ ಆಯತಪ್ಪಿ ತಾನು ಬಂದ ರೈಲಿನಡಿಗೆ ಸಿಲುಕಿದ್ದಾರೆ.
ಘಟನೆಯಿಂದಾಗಿ ಯುವಕನ ಕೈ ಕಾಲುಗಳಿಗೆ ತೀವ್ರವಾದ ಪೆಟ್ಟು ಬಿದ್ದಿತ್ತು. ನರಳಾಡುತ್ತಿದ್ದ ಯುವಕನನ್ನು ಕಂಡು ಮನೆಯವರ ಪೋನ್ ನಂಬರ್ ಪಡೆದು ಮಾಹಿತಿ ನೀಡಲಾಗಿತ್ತು. ಆದರೆ ಆಸ್ಪತ್ರೆಗೆ ರವಾನಿಸುವಷ್ಟರಲ್ಲಿ ಯುವಕ ಸಾವನ್ನಪ್ಪಿದ್ದ. ತಕ್ಷಣವೇ ಆಸ್ಪತ್ರೆಗೆ ಸಾಗಿಸಿದ್ದರೆ, ಯುವಕನನ್ನು ರಕ್ಷಿಸಲು ಸಾಧ್ಯವಾಗುತ್ತಿತ್ತು ಎಂಬ ಮಾತುಗಳೂ ಸಾರ್ವಜನಿಕ ವಲಯದಲ್ಲಿ ಕೇಳಿಬಂದವು.
Kshetra Samachara
03/02/2025 05:42 pm