ಹುಬ್ಬಳ್ಳಿ : ಪಂಜಾಬ್ ಅಮೃತಸರದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಹಾಡಹಗಲೇ ಧ್ವಂಸ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಮತ್ತು ವಿಜಯಪುರ ಜಿಲ್ಲೆ ಗಾಂಧಿನಗರದಲ್ಲಿ ಇಟ್ಟಿಗೆ ಬಟ್ಟಿ ಮಾಲೀಕರು ಕೂಲಿ ಕಾರ್ಮಿಕರಿಗೆ ಚಿತ್ರಹಿಂಸೆ ನೀಡಿರುವ ಘಟನೆಯನ್ನು ಖಂಡಿಸಿ, ಹುಬ್ಬಳ್ಳಿಯಲ್ಲಿ ವಿವಿಧ ಸಂಘಟನೆಗಳು ಒಕ್ಕೂಟದ ವತಿಯಿಂದ ಪ್ರತಿಭಟನೆ ಮಾಡಿದರು.
ಹುಬ್ಬಳ್ಳಿಯ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ಸರ್ಕಲ್‌ನಿಂದ ಪ್ರತಿಭಟನೆ ಮಾಡಿದ ವಿವಿಧ ದಲಿತ ಸಂಘಟನೆಗಳು, ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಹೋರಾಟ ಮಾಡಿದರು. ಕೂಡಲೇ ತಪ್ಪಿತಸ್ಥ ಮೇಲೆ ಕ್ರಮ ಜರುಗಿಸಿ ಎಂದು ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮತ್ತು ಕೇಂದ್ರ ಸರ್ಕಾರ ಮನವಿ ಸಲ್ಲಿಸಿದರು.
Kshetra Samachara
03/02/2025 06:21 pm