ಚಳ್ಳಕೆರೆ: ಚಳ್ಳಕೆರೆ ತಾಲೂಕಿನ ಹಾಲುಗೊಂಡನಹಳ್ಳಿ ಗ್ರಾಮದ ಸಮೀಪ ದಿಣ್ಣೆ ಮೇಲೆ ಇರುವ ಗುಡಿಸಲಿಗೆ ಆಕಸ್ಮಿಕ ಬೆಂಕಿ ಬಿದ್ದಿದ್ದು ಎಂಟು ಗುಡಿಸಲುಗಳು ಸುಟ್ಟು ಭಸ್ಮವಾಗಿವೆ.
ಯಾರೋ ಕಿಡಿಗೇಡಿಗಳು ಬದುವಿನ ಹುಲ್ಲಿಗೆ ಬೆಂಕಿ ಇಟ್ಟಿದ್ದು ಗಾಳಿಗೆ ಬೆಂಕಿ ಹೊತ್ತಿಕೊಂಡು ಗುಡಿಸಲುಗಳು ಭಸ್ಮವಾಗಿವೆ. ಈ ಗುಡಿಸಿಲಿನಲ್ಲಿ ಯಾರೂ ವಾಸ ಮಾಡದೇ ಇರುವ ಕಾರಣ ದೊಡ್ಡ ಅನಾಹುತ ತಪ್ಪಿದಂತಾಗಿದೆ. ರಸ್ತೆಯಲ್ಲಿ ಸಂಚರಿಸುವ ನಾಗರೀಕರು ಬೆಂಕಿ ಉರಿಯುತ್ತಿರುವುದನ್ನು ಕಂಡು ಅಗ್ನಿಶಾಮಕ ಠಾಣೆಗೆ ಕರೆ ಮಾಡಿದ್ದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸಿದ್ದಾರೆ.
PublicNext
03/02/2025 06:25 pm