", "articleSection": "Others", "image": { "@type": "ImageObject", "url": "https://prod.cdn.publicnext.com/s3fs-public/28305320250203074505filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Pavan Kolar" }, "editor": { "@type": "Person", "name": "8861034066" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಮಾಲೂರು - ಸರ್ಕಾರಿ ಶಾಲೆ ಶಿಕ್ಷಕರಿಗೆ ಬೋಧನೆಗಿಂತ ಇತರೆ ಕೆಲಸಗಳೇ ಹೆಚ್ಚಾಗಿ ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಸರ್ಕಾರಿ ಶಾಲೆಗಳು ಮುಚ್ಚುವ ಪರಿಸ...Read more" } ", "keywords": "Node,Kolar,Others", "url": "https://publicnext.com/node" }
ಮಾಲೂರು - ಸರ್ಕಾರಿ ಶಾಲೆ ಶಿಕ್ಷಕರಿಗೆ ಬೋಧನೆಗಿಂತ ಇತರೆ ಕೆಲಸಗಳೇ ಹೆಚ್ಚಾಗಿ ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಸರ್ಕಾರಿ ಶಾಲೆಗಳು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದೆ ಮುಂದಿನ ವರ್ಷ ಮಕ್ಕಳ ದಾಖಲಾತಿ ಪ್ರಮಾಣ ಹೆಚ್ಚಿಸಬೇಕು ಎಂದು ಕ್ಷೇತ್ರ ಶಿಕ್ಷಣ ಅಧಿಕಾರಿ ಚಂದ್ರಕಲಾಗೆ ಶಾಸಕ ಕೆ ವೈ ವೈ ನಂಜೇಗೌಡ ಸೂಚನೆ ನೀಡಿದರು. ಮಾಲೂರು ತಾಲ್ಲೂಕಿನ ತೊರ್ನಹಳ್ಳಿ ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯ್ತಿ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ಹಾಗೂ ಒಸಾಟ್ ಸಂಸ್ಥೆ ಸಹಯೋಗದಲ್ಲಿ ನಿರ್ಮಾಣವಾದ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು, ಸರ್ಕಾರಿ ಶಾಲೆಗಳಿಗೆ ಸರ್ಕಾರಗಳ ಅನುದಾನದ ಜೊತೆಗೆ ದಾನಿಗಳು ಹಾಗೂ ಖಾಸಗಿ ಕಂಪೆನಿಗಳ ಸಿ ಎಸ್ ಆರ್ ಅನುದಾನಗಳಿಂದ ಸರ್ಕಾರಿ ಶಾಲೆಗಳ ಉನ್ನತೀಕರಿಸಲಾಗುತ್ತಿದ್ದು ಈಗಾಗಲೇ ಸರ್ಕಾರದಿಂದ ಮಕ್ಕಳಿಗೆ ಹಾಲು ಮದ್ಯಾಹ್ನದ ಊಟ ಉಚಿತ ಬಟ್ಟೆ, ಶೂ ,ಮತ್ತು ಮೊಟ್ಟೆಯನ್ನು ವಿತರಿಸುತ್ತಿದೆ ಎಂದರು.
ಗ್ರಾಮೀಣ ಪ್ರದೇಶದಲ್ಲಿ ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗಿ ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲು ಮಾಡಲು ಪೋಷಕರು ಹಿಂದೇಟು ಹಾಕುತ್ತಿದ್ದು ಸರ್ಕಾರಿ ಶಾಲೆಗಳು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಷಾದ ವ್ಯಕ್ತ ಪಡಿಸಿದರು.
Kshetra Samachara
03/02/2025 07:45 pm