ಹಾವೇರಿ : ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಹಾವೇರಿ ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿ ನೇಣಿಗೆ ಶರಣಾಗಿರುವ ಆರೋಪ ಕೇಳಿಬಂದಿದೆ. ಹಾವೇರಿ ಜಿಲ್ಲೆ ರಾಣೆಬೇನ್ನೂರು ನಗರದ ಅಡವಿ ಆಂಜನೇಯ ಬಡಾವಣೆಯ ೪೨ ವರ್ಷದ ಮಾಲತೇಶ ಅರಸಿಕೇರಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ಮೈಕ್ರೋ ಫೈನಾನ್ಸ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಮಾಲತೇಶ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ.
ಮಾಲತೇಶ ಅಡವಿ ಆಂಜನೇಯ ಬಡಾವಣೆಯಲ್ಲಿ ಹೇರ್ ಕಟಿಂಗ್ ಶಾಪ್ ನಡೆಸುತ್ತಿದ್ದ. ಮಾಲತೇಶ್ ಹಾಗೂ ಗೀತಾ ದಂಪತಿ ನಾಲ್ಕು ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದ. ಸಾಲ ಕಟ್ಟಲು ಹಣ ತರೋಕೆ ಅಂತ ಮಾಲತೇಶ್ ಪತ್ನಿ ತವರು ಮನೆಗೆ ಹೋಗಿದ್ದ ವೇಳೆ ಮಾಲತೇಶ್ ನೇಣಿಗೆ ಶರಣಾಗಿದ್ದಾನೆ.
ಮೃತ ಮಾಲತೇಶ್ ಗೆ ಇಬ್ಬರು ಗಂಡು ಮಕ್ಕಳಿದ್ದು ಅದರಲ್ಲಿ ಎರಡನೇ ಮಗನಿಗೆ ಕೇವಲ 6 ತಿಂಗಳು.
6 ತಿಂಗಳ ಕಂದಮ್ಮನನ್ನು ಬಿಟ್ಟು ಮಾಲತೇಶ್ ನೇಣಿಗೆ ಶರಣಾಗಿದ್ದಾನೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಮಾಲತೇಶ ನೇಣಿಗೆ ಶರಣಾಗಿದ್ದಾನೆ.
ರಾಣೆಬೇನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
03/02/2025 10:03 pm