ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬಿಎಂಆರ್‌ಡಿಎ ಕಚೇರಿಯಲ್ಲಿ ಸೋಮವಾರ ಬಿಡಿಎ ಹಾಗೂ ಬಿಎಂಆರ್‌ಡಿಎ ಅಧಿಕಾರಿಗಳ ಸಭೆ ನಡೆಸಿ ವಿವಿಧ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷ ಶಾಸಕ ಎನ್.ಎ ಹ್ಯಾರಿಸ್, ಬೆಂಗಳೂರು - ಮೈಸೂರು ಇನ್ಫ್ರಾಸ್ಟ್ರಕ್ಟರ್ ಕಾರಿಡಾರ್ ಪ್ಲಾನಿಂಗ್ ಅಥಾರಿಟಿ (BMICAPA) ಅಧ್ಯಕ್ಷ ರಘುನಂದನ್ ರಾಮಣ್ಣ, ಬಿಡಿಎ ಆಯುಕ್ತ ಎನ್. ಜಯರಾಮ್, ಬಿಬಿಎಂಪಿ ಆಡಳಿತಾಧಿಕಾರಿ, ಎಸಿಎಸ್ ಉಮಾಶಂಕರ್, ಡಿಸಿಎಂ ಕಾರ್ಯದರ್ಶಿ, ಬಿಎಂಆರ್ ಡಿಎ ಕಮಿಷನರ್ ರಾಜೇಂದ್ರ ಚೋಳನ್ ಮತ್ತಿತರರು ಭಾಗವಹಿಸಿದ್ದರು.
PublicNext
03/02/2025 10:52 pm