ನವದೆಹಲಿ: ಯುಎಸ್ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 12 ಹಾಗೂ 13 ರಂದು ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಧಿಕೃತ ಮಾಹಿತಿ ಪ್ರಕಾರ, ಪ್ರಧಾನಿ ಮೋದಿ ಅವರು ಫೆಬ್ರವರಿ 10 ಹಾಗೂ 12ರಂದು ಫ್ರಾನ್ಸ್ ಪ್ರವಾಸ ಮಾಡಲಿದ್ದಾರೆ. ಈ ವೇಳೆ ಫ್ರಾನ್ಸ್ ಸರ್ಕಾರ ಆಯೋಜಿಸಿರುವ ಎಐ ಸಮ್ಮಿಟ್ ನಲ್ಲಿ ಪ್ರಧಾನಿ ಮೋದಿ ಭಾಗವಹಿಸಲಾಗಿದ್ದಾರೆ. ನಂತರ ವಾಷಿಂಗ್ಟನ್ ಡಿಸಿಗೆ ಪ್ರಯಾಣಿಸಲಿದ್ದಾರೆ. ಫೆಬ್ರವರಿ 13 ರಂದು ಟ್ರಂಪ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ಟ್ರಂಪ್ ಅಧ್ಯಕ್ಷರಾದ ಬಳಿಕ ಪ್ರಧಾನಿ ಮೋದಿ ಅವರ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ವಿಶೇಷ ಅಂದರೆ ಡೋನಾಲ್ಡ್ ಟ್ರಂಪ್ ಅಧಿಕಾರವಹಿಸಿಕೊಂಡ ಬಳಿಕ ಅಮೆರಿಕಾಗೆ ತೆರಳಿ ಅಧ್ಯಕ್ಷರ ಜೊತೆ ಚರ್ಚಿಸಲಿರುವ ಮೊದಲ ಅಂತಾರಾಷ್ಟ್ರೀಯ ನಾಯಕ ಅನ್ನೋ ಹೆಗ್ಗಳಿಕೆಗೂ ಮೋದಿ ಪಾತ್ರರಾಗಲಿದ್ದಾರೆ.
ಪ್ರಧಾನಿ ಮೋದಿ ಅಮೆರಿಕ ಭೇಟಿಯ ಅಧೀಕೃತ ಮಾಹಿತಿಗಳು ಇನ್ನಷ್ಟೇ ಹೊರಬೀಳಬೇಕಿದೆ. ಪ್ರಮುಖವಾಗಿ ರಕ್ಷಣಾ ಕ್ಷೇತ್ರ, ಪ್ರಾದೇಶಿಕ ಸುರಕ್ಷತೆ, ವ್ಯಾಪಾರ ವಹಿವಾಟು ಸೇರಿದಂತೆ ಹಲವು ಕ್ಷೇತ್ರಗಳ ಕುರಿತು ಮೋದಿ ಹಾಗೂ ಟ್ರಂಪ್ ಚರ್ಚೆ ನಡೆಸುವ ಸಾಧ್ಯತೆ ಇದೆ.
PublicNext
04/02/2025 10:24 am