ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಗಾಂಜಾ ಮಾರಾಟ - ಆರೋಪಿ ಬಂಧನ

ಶಿವಮೊಗ್ಗ: ದ್ವಿಚಕ್ರ ವಾಹನದಲ್ಲಿ ಸುತ್ತಾಡಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬಿಲಗೋಡಿ ಗ್ರಾಮದ ಪ್ರತಾಪ್ ಎಸ್ (26) ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ 6,000 ರೂಪಾಯಿಗಳ 349 ಗ್ರಾಂ ತೂಕದ ಒಣ ಗಾಂಜಾ, 600 ನಗದು ಹಣ ಮತ್ತು ಕೃತ್ಯಕ್ಕೆ ಉಪಯೋಗಿಸಿದ 8,000 ರೂಪಾಯಿಗಳ ಮೊಬೈಲ್ ಫೋನ್, ಹಾಗೂ 20,000 ರೂಪಾಯಿಗಳ ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.

ಈತ ಶಿವಮೊಗ್ಗ ದ ಜೆ.ಹೆಚ್. ಪಟೇಲ್ ಬಡಾವಣೆಯ ತುಂಗಾ ಚಾನಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ. ಈ ವೇಳೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
PublicNext

PublicNext

04/02/2025 10:46 am

Cinque Terre

16.97 K

Cinque Terre

0

ಸಂಬಂಧಿತ ಸುದ್ದಿ