", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/405356-1738648032-pppp.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PralhadBGM" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಳಗಾವಿ: ಲಾರಿ ಹಾಗೂ ಕಾರು ಮಧ್ಯೆ ಅಪಘಾತ ಸಂಭವಿಸಿ ವೈದ್ಯೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಸಮೀಪದ ರಾಷ್ಟ್ರ...Read more" } ", "keywords": "Belagavi, Bellambi, Jawarayan's Assault, Doctor's Death, Medical Negligence, Karnataka News, Belagavi Crime, Assault on Doctor, Medical Community, Healthcare Issues, Patient's Relative Assault.,Belgaum,Accident", "url": "https://publicnext.com/node" }
ಬೆಳಗಾವಿ: ಲಾರಿ ಹಾಗೂ ಕಾರು ಮಧ್ಯೆ ಅಪಘಾತ ಸಂಭವಿಸಿ ವೈದ್ಯೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಂಬೆಳಗ್ಗೆ ಸಂಭವಿಸಿದೆ.
ಮೂಡಲಗಿ ತಾಲೂಕಿನ ಸಂಗಣಕೇರಿಯ ವೈದ್ಯೆ ಆಶಾ ಕೋಳಿ (32) ಮೃತ ದುರ್ದೈವಿ. ಡಾ. ಆಶಾ ಕೋಳಿ ಹಾಗೂ ಪತಿ ಡಾ. ಭೀಮಪ್ಪ ಕೋಳಿ ಧಾರವಾಡದಿಂದ ಬೆಳಗಾವಿ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಹಿರೇಬಾಗೇವಾಡಿ ಬಳಿ ಕಾರಿ ನಿಯಂತ್ರಣ ತಪ್ಪಿ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿ, ಅದರಲ್ಲಿ ಸಿಲುಕಿದ ವೈದ್ಯೆ ಆಶಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲನೆ ಮಾಡುತ್ತಿದ್ದ ಆಶಾ ಅವರ ಪತಿ ಡಾ. ಭೀಮಪ್ಪ ಕೋಳಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
04/02/2025 11:17 am