ಶಿವಮೊಗ್ಗ: ಮಾದಕ ವಸ್ತು ಗಾಂಜಾ ಮಾರುತ್ತಿದ್ದ ಆರೋಪಿಯನ್ನ ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.
ಸುರೇಂದ್ರ ಅಲಿಯಾಸ್ ಬಬ್ಲು (30) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಸುರೇಂದ್ರನಿಂದ 5,000 ರೂಪಾಯಿ ಮೌಲ್ಯದ 363 ಗ್ರಾಂ ತೂಕದ ಒಣ ಗಾಂಜಾ, 500 ರೂಪಾಯಿ ನಗದು ಮತ್ತು ಕೃತ್ಯಕ್ಕೆ ಉಪಯೋಗಿಸಿದ 15,000 ರೂಪಾಯಿ ಮೌಲ್ಯದ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ಶಿವಮೊಗ್ಗದ ಕೀರ್ತಿ ನಗರದ ದೇವಂಗಿ ಪಾರ್ಕ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ. ಸಾರ್ವಜನಿಕರಿಗೆ ಗಾಂಜಾ ತೆಗೆದುಕೊಳ್ಳುವಂತೆ ಪ್ರೇರಿಪಿಸುತ್ತಿದ್ದ. ಈ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
04/02/2025 12:34 pm