ಮಂಗಳೂರು: ಕಟ್ಟಡದ ರಾಡ್ ಕಟ್ಟಿಂಗ್ ಮಾಡುತ್ತಿದ್ದ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ವಾಮಂಜೂರು ಬಳಿ ನಡೆದಿದೆ.
ಮೃತಪಟ್ಟ ಕಾರ್ಮಿಕ ಕೋಲ್ಕತ್ತಾ ಮೂಲದವನು ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಕಟ್ಟಡದ ಮುಂಭಾಗ ಕೆಡವಲಾಗಿತ್ತು. ಈ ಹಿನ್ನೆಲೆಯಲ್ಲಿ ಕಟ್ಟಡದಲ್ಲಿ ಈ ಕಾರ್ಮಿಕ ರಾಡ್ ಕಟ್ಟಿಂಗ್ ಕೆಲಸ ಮಾಡುತ್ತಿದ್ದ. ಈ ವೇಳೆ ಕಟ್ಟಡ ಮೇಲ್ಭಾಗದಲ್ಲಿದಲ್ಲಿದ್ದ ವಿದ್ಯುತ್ ತಂತಿಗೆ ಕಟ್ಟಡದ ರಾಡ್ ಸ್ಪರ್ಶಿಸಿ ಕಾರ್ಮಿಕ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
PublicNext
04/02/2025 12:40 pm