ಗದಗ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ನಡೆದಿದೆ.
ಈರಪ್ಪ ಕುರಡಗಿ (46) ಮೃತ ರೈತ. ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳೀಯ ಕೆವಿಜಿ ಬ್ಯಾಂಕ್‌ನಲ್ಲಿ 1.20 ಲಕ್ಷ ರೂಪಾಯಿ ಬೆಳೆ ಸಾಲ, ಸ್ತ್ರೀ ಶಕ್ತಿ ಸಂಘ, ಕೈ ಸಾಲ ಸೇರಿ ಸುಮಾರು 2 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದರು. 2 ಎಕರೆ ಜಮೀನಿನಲ್ಲಿ ಸರಿಯಾಗಿ ಫಸಲು ಬಾರದ ಹಿನ್ನೆಲೆ ಮನನೊಂದಿದ್ದ ಈರಪ್ಪ ಜಮೀನಿನಲ್ಲಿ ಆತ್ಮಹತ್ಯೆಗೆ ಶಣರಾಗಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
04/02/2025 12:53 pm