", "articleSection": "Government,News,Public News", "image": { "@type": "ImageObject", "url": "https://prod.cdn.publicnext.com/s3fs-public/39952920250204032413filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "AnandChitradurga" }, "editor": { "@type": "Person", "name": "9742704237" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿತ್ರದುರ್ಗ: ರಾಜ್ಯದಲ್ಲಿಯೇ ಚಿತ್ರದುರ್ಗ ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಿದ್ದು, ಬಾಲ್ಯವಿವಾಹಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲ...Read more" } ", "keywords": "Node,Chitradurga,Government,News,Public-News", "url": "https://publicnext.com/node" }
ಚಿತ್ರದುರ್ಗ: ರಾಜ್ಯದಲ್ಲಿಯೇ ಚಿತ್ರದುರ್ಗ ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಿದ್ದು, ಬಾಲ್ಯವಿವಾಹಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಅಗತ್ಯ ಎಂದು 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯ 10 ವರ್ಷ ಪೂರ್ಣಗೊಳಿಸಿದ ಪ್ರಯುಕ್ತ “ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತಂದೆ-ತಾಯಿಗಳು ತಮ್ಮ ಜವಾಬ್ದಾರಿಯನ್ನು ಕಳೆದುಕೊಳ್ಳಬೇಕು ಎಂಬ ಉದ್ದೇಶದಿಂದ ನಿಗದಿತ ವಿವಾಹ ವಯಸ್ಸು ಉಲ್ಲಂಘಿಸಿ ಅಪ್ರಾಪ್ತರನ್ನು ವಿವಾಹ ಮಾಡುವ ಪದ್ಧತಿ ಕಾನೂನಿನ ಪ್ರಕಾರ ಅಪರಾಧ. ಹಾಗಾಗಿ ಬಾಲ್ಯವಿವಾಹಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೋಷಕರು ಹೆಚ್ಚು ನಿಗಾ ವಹಿಸಿ ಬಾಲ್ಯವಿವಾಹ ತಡೆಯಲು ಪ್ರಯತ್ನ ಮಾಡಬೇಕು ಎಂದು ಹೇಳಿದರು.
ಹೆಣ್ಣು ಮಕ್ಕಳ ಮುಂದಿನ ಉತ್ತಮ ಭವಿಷ್ಯಕ್ಕಾಗಿ ಹೆಣ್ಣು ಮಕ್ಕಳಿಗಿರುವ ಹಕ್ಕು ಮತ್ತು ಕರ್ತವ್ಯಗಳನ್ನು ತಿಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಆಚರಿಸಲಾಗುತ್ತಿದೆ. ಆಸ್ತಿ ಹಕ್ಕು ಸೇರಿದಂತೆ ಹೆಣ್ಣು ಮಕ್ಕಳಿಗೆ ವಿವಿಧ ಹಕ್ಕುಗಳು ಕಾನೂನಿನ ಅಡಿಯಲ್ಲಿ ಇವೆ. ಅವುಗಳನ್ನು ತಿಳಿದುಕೊಳ್ಳಬೇಕು. ಮಗು ತಾಯಿ ಗರ್ಭದಲ್ಲಿ ಇರುವಾಗಲೇ ಹೆಣ್ಣು ಮಕ್ಕಳಿಗೆ ಹಕ್ಕುಗಳು ಪ್ರಾರಂಭವಾಗುತ್ತವೆ ಎಂದು ಹೇಳಿದರು.
ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರಿಗೆ ಸಾಕಷ್ಟು ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಇದರ ಜೊತೆಗೆ ಕಾನೂನಿನ ಅಡಿಯಲ್ಲಿ ಹೆಣ್ಣು ಮಕ್ಕಳಿಗಾಗಿ ಬಹಳಷ್ಟು ಕಾನೂನುಗಳನ್ನು ರೂಪಿಸಲಾಗಿದ್ದು, ಪ್ರತಿಯೊಂದು ಹಂತದಲ್ಲಿಯೂ ಸಹ ಅವಕಾಶಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಮಾತನಾಡಿ, ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು 2008ರಿಂದಲೂ ಪ್ರತಿ ವರ್ಷವೂ ಆಚರಣೆ ಮಾಡಲಾಗುತ್ತಿದೆ. ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಈ ದಿನಾಚರಣೆ ಅನುಷ್ಠಾನಗೊಳಿಸಲಾಗುತ್ತಿದೆ. ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಗಳ ಬಗ್ಗೆ ಸಾರ್ವಜನಿಕ ಜಾಗೃತಿ ಮೂಡಿಸಲು ಪ್ರಾರಂಭಿಸಲಾಯಿತು. ಹಾಗೆಯೇ ಹೆಣ್ಣು ಮಕ್ಕಳ ಹಕ್ಕುಗಳು, ಶಿಕ್ಷಣ ಹಾಗೂ ಕಲ್ಯಾಣವನ್ನು ಎತ್ತಿಹಿಡಿಯಲು ಮೀಸಲಾಗಿರುವ ಮಹತ್ವದ ಸಂದರ್ಭವೂ ಹೌದು ಎಂದು ತಿಳಿಸಿದ ಅವರು, ಲಿಂಗ ತಾರತಮ್ಯ ಬಗ್ಗೆ ಅಡೆತಡೆ ಇಲ್ಲದೆ ಅಭಿವೃದ್ದಿ ಹೊಂದುವ ವಾತಾವರಣ ಸೃಷ್ಠಿಸುವ ಗುರಿ ಹೊಂದಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ, ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ನೆಲವತಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಸುಧಾ, ವೀಣಾ ಸೇರಿದಂತೆ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಇದ್ದರು.
Kshetra Samachara
04/02/2025 03:24 pm