", "articleSection": "Others", "image": { "@type": "ImageObject", "url": "https://prod.cdn.publicnext.com/s3fs-public/28305320250204035552filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Pavan Kolar" }, "editor": { "@type": "Person", "name": "8861034066" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಕೋಲಾರ - ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ...Read more" } ", "keywords": "Node,Kolar,Others", "url": "https://publicnext.com/node" } ಕೋಲಾರ - ಒತ್ತುವರಿಯಾಗಿರುವ ಕೆರೆಗಳನ್ನು ತೆರವುಗಳಿಸಿ- ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ - ಒತ್ತುವರಿಯಾಗಿರುವ ಕೆರೆಗಳನ್ನು ತೆರವುಗಳಿಸಿ- ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ

ಕೋಲಾರ - ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಕೆರೆಗಳ ಒತ್ತುವರಿ ತೆರವು ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು, ರಾಷ್ಟ್ರೀಯ ಹಸಿರು ಪ್ರಾಧಿಕಾರದ ಆದೇಶದಂತೆ ಜಿಲ್ಲಾ ಮಟ್ಟದಲ್ಲಿ ಈ ಕುರಿತಾದ ಸಮಿತಿಯನ್ನು ರಚಿಸಲಾಗಿದೆ. ಎಲ್ಲಾ ಕೆರೆಗಳ ಸರ್ವೇ ಕಾರ್ಯವನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಎಲ್ಲಾ ತಹಶೀಲ್ದಾರ್ ಕ್ರಮ ವಹಿಸಬೇಕು. ಪ್ರತಿ ತಿಂಗಳು ಗುರಿಯನ್ನು ನಿಗದಿಪಡಿಸಿ ಕೆರೆಗಳ ಒತ್ತುವರಿ ತೆರವುಗೊಳಿಸಿ ವರದಿಯನ್ನು ಸಲ್ಲಿಸಬೇಕು ಎಂದು ಹೇಳಿದರು. ಕೆರೆಗಳ ಒತ್ತುವರಿ ತೆರವುಗೊಳಿಸಿದ ಬಳಿಕ, ಆ ಕೆರೆಯನ್ನು ಸಂಬಂಧಪಟ್ಟ ಇಲಾಖೆಯ ಸುಪರ್ದಿಗೆ ಒಪ್ಪಿಸಿ, ಇಲಾಖೆಯ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ ಅಧಿಸೂಚನೆ ಹೊರಡಿಸಬೇಕು. ಮತ್ತೆ ಒತ್ತುವರಿಯಾದರೆ ಆಯಾ ಅಧಿಕಾರಿಯನ್ನು ಹೊಣೆಗಾರರನ್ನಾಗಿಸಿ ಮೊಕದ್ದಮೆ ದಾಖಲಿಸಬೇಕು ಎಂದು ಸೂಚನೆ ನೀಡಿದರು.

Edited By : PublicNext Desk
Kshetra Samachara

Kshetra Samachara

04/02/2025 03:56 pm

Cinque Terre

280

Cinque Terre

0

ಸಂಬಂಧಿತ ಸುದ್ದಿ