ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಾಮೀಯ ಮಸೀದಿಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

ಉಡುಪಿ: ರಕ್ತ ಅಂದರೆ ಜೀವ. ರಕ್ತದಾನ ಮಾಡುವುದರಿಂದ ಮನಸ್ಸಿಗೆ ತೃಪ್ತಿ ಸಿಗುತ್ತದೆ. ಯುವಜನತೆಯಲ್ಲಿ ರಕ್ತದಾನದ ಮಹತ್ವವನ್ನು ತಿಳಿಸಿ ಅವರಲ್ಲಿ ರಕ್ತದಾನದ ಪ್ರಜ್ಞೆಯನ್ನು ಬೆಳೆಸಬೇಕು. ರಕ್ತದಾನದಿಂದ ಆರೋಗ್ಯಕ್ಕೆ ಹೆಚ್ಚು ಪ್ರಯೋಜನ ಇದೆ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಉಡುಪಿ ಕರಾವಳಿ ಅಧ್ಯಕ್ಷ ಡಾ.ಸುರೇಶ್ ಶೆಣೈ ಹೇಳಿದ್ದಾರೆ.

ಉಡುಪಿ ಮುಸ್ಲಿಮ್ ವೆಲ್‌ಫೇರ್ ಅಸೋಸಿಯೇಶನ್ ಮತ್ತು ಮಣಿಪಾಲ ಕೆಎಂಸಿ ಬ್ಲಡ್ ಸೆಂಟರ್ ಸಹಯೋಗದೊಂದಿಗೆ ಉಡುಪಿ ಜಾಮೀಯ ಮಸೀದಿ ವಠಾರದಲ್ಲಿ ಮಂಗಳವಾರ ಆಯೋಜಿಸಲಾದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕೆಎಂಸಿ ಬ್ಲಡ್ ಸೆಂಟರ್‌ನ ಮುಖ್ಯಸ್ಥೆ ಡಾ.ಶಮೀ ಶಾಸ್ತ್ರೀ ಮಾತನಾಡಿ, ರಕ್ತದಾನ ಎಂಬುದು ಪುಣ್ಯದ ಕೆಲಸ. ಒಬ್ಬ ರಕ್ತದಾನ ಮಾಡುವುದರಿಂದ 3-4 ಮಂದಿಯ ಜೀವ ಉಳಿಸಬಹುದಾಗಿದೆ. ಪ್ರತಿದಿನ ನಮ್ಮ ಕೇಂದ್ರದಲ್ಲಿ 100-150 ಮಂದಿ ರಕ್ತದಾನ ಮಾಡುತ್ತಿದ್ದು, ಅವರಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವವರು ಕೇವಲ ಶೇ.10ರಷ್ಟು ಮಾತ್ರ. ಆದುದರಿಂದ ರಕ್ತದಾನ ಕುರಿತು ಜನರಲ್ಲಿರುವ ತಪ್ಪು ಕಲ್ಪನೆ ದೂರ ಮಾಡಬೇಕಾಗಿದೆ ಎಂದರು.

ಉಡುಪಿ ಜಾಮೀಯ ಮಸೀದಿ ಅಧ್ಯಕ್ಷ ರಿಯಾಝ್ ಅಹಮದ್, ಸಾಮಾಜಿಕ ಕಾರ್ಯಕರ್ತ ಮುನೀರ್ ಕಲ್ಮಾಡಿ ಮುಖ್ಯ ಅತಿಥಿಗಳಾಗಿದ್ದರು. ಅಸೋಸಿಯೇಶನ್ ಅಧ್ಯಕ್ಷ ಮುನೀರ್ ಮುಹಮ್ಮದ್ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

04/02/2025 04:34 pm

Cinque Terre

2.08 K

Cinque Terre

0

ಸಂಬಂಧಿತ ಸುದ್ದಿ