", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/52563-1738667802-Untitled-design-(60).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivakumarHaveri" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾವೇರಿ : ಬಾಲಕ ಕೆನ್ನೆಗಾದ ಗಾಯಕ್ಕೆ ಸ್ಟಿಚ್ ಹಾಕುವ ಬದಲು ನರ್ಸ್ ಒಬ್ಬಳು ಫೆವಿಕ್ವಿಕ್ ಹಾಕಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಹಾನಗಲ್ ...Read more" } ", "keywords": "Haveri, nurse, injection, fever, medication, medical error, healthcare, hospital, patient care, nursing mistake, medical news,Crime", "url": "https://publicnext.com/node" }
ಹಾವೇರಿ : ಬಾಲಕ ಕೆನ್ನೆಗಾದ ಗಾಯಕ್ಕೆ ಸ್ಟಿಚ್ ಹಾಕುವ ಬದಲು ನರ್ಸ್ ಒಬ್ಬಳು ಫೆವಿಕ್ವಿಕ್ ಹಾಕಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಘಟನೆ ನಡೆದಿದೆ. ಕಳೆದ ಜನವರಿ 14ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
7 ವರ್ಷದ ಗುರುಕಿಶನ್ ಅಣ್ಣಪ್ಪ ಹೊಸಮನಿ ಎಂಬ ಬಾಲಕನಿಗೆ ಕೆನ್ನೆ ಮೇಲೆ ಗಾಯ ಆಗಿತ್ತು. ಆಟ ಆಡುವಾಗ ಗುರುಕಿಶನ್ ಕೆನ್ನೆಗೆ ಗಾಯ ಮಾಡಿಕೊಂಡಿದ್ದ. ಕೆನ್ನೆಯ ಮೇಲಿನ ಗಾಯ ಬಹಳ ಆಳಕ್ಕೆ ಇಳಿದಿದ್ದರಿಂದ ರಕ್ತ ಕೂಡ ಸುರಿಯುತ್ತಿತ್ತು. ಕೂಡಲೇ ಬಾಲಕ ಗುರುಕಿಶನ್ ನನ್ನು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕುಟುಂಬಸ್ಥರು ಕರೆದೊಯ್ದಿದ್ದರು. ಗಾಯಕ್ಕೆ ಹೊಲಿಗೆ ಹಾಕೋದು ಬಿಟ್ಟ ನರ್ಸ್ ಜ್ಯೋತಿ ಎನ್ನುವವರು ಫೆವಿಕ್ವಿಕ್ ಗಮ್ ಅಂಟಿಸಿ ಚಿಕಿತ್ಸೆ ನೀಡಿದ್ದರು.
ಬಾಲಕನಿಗೆ ಫೆವಿಕ್ವಿಕ್ ಯಾಕೆ ಹಾಕಿದ್ರಿ ಅಂತ ಕೇಳಿದರೆ ಸ್ಟಿಚ್ ಹಾಕಿದರೆ ಬಾಲಕನ ಕೆನ್ನೆ ಮೇಲೆ ಕಲೆ ಆಗುತ್ತಿತ್ತು. ಹೀಗಾಗಿ ಚರ್ಮದ ಮೇಲೆ ಫೆವಿಕ್ವಿಕ್ ಹಾಕಿ ಚಿಕಿತ್ಸೆ ನೀಡಿದ್ದೇನೆ ಎಂದು ನರ್ಸ್ ಜ್ಯೋತಿ ತನ್ನ ಕೆಲಸ ಸಮರ್ಥಿಸಿಕೊಂಡಿದ್ದಾಳೆ.
ಈ ಬಗ್ಗೆ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಬಾಲಕನ ಪೋಷಕರು ದೂರು ನೀಡಿದ್ದಾರೆ. ಈ ಬಗ್ಗೆ ವರದಿ ಪಡೆದು ಕ್ರಮ ಜರುಗಿಸಲು ಡಿ.ಹೆಚ್ ಒ ರಾಜೇಶ್ ಸುರಗಿಹಳ್ಳಿ ಮುಂದಾಗಿದ್ದಾರ.
ಹಾವೇರಿ ತಾಲೂಕು ಗುತ್ತಲ ಆರೋಗ್ಯ ಸಂಸ್ಥೆಗೆ ನಿಯೋಜನೆ ಮಾಡಲು ಡಿಹೆಚ್.ಒ ಆದೇಶ ಮಾಡಿದ್ದಾರೆ. ಫೆವಿಕ್ವಿಕ್ ಹಾಕಿ ನಿರ್ಲಕ್ಷ್ಯ ತೋರಿದರೂ ನರ್ಸ್ ಜ್ಯೋತಿ ಅಮಾನತು ಮಾಡಲು ಡಿಹೆಚ್ ಒ ಹಿಂದೇಟು ಹಾಕಿದ್ದಾರೆ.
PublicNext
04/02/2025 04:46 pm