ಮೈಸೂರು : ಮೈಸೂರಿನಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ಈ ವರೆಗೆ ಮೈಸೂರು ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ 5 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗ್ತಿದೆ. 55 ವರ್ಷದ ಜಯರಾಮು ಫೈನಾನ್ಸ್ ಕಿರುಕುಳಕ್ಕೆ ಬಲಿಯಾದ ವ್ಯಕ್ತಿ. ಹೆಚ್ ಡಿ ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇಕ್ವಿಟಾಸ್, ಜನಬ್ಯಾಂಕ್ ಮೈಕ್ರೋ ಫೈನಾನ್ಸ್ ನಲ್ಲಿ ಸುಮಾರು 5 ಲಕ್ಷ ಸಾಲ ಪಡೆದಿದ್ದ ರೈತ.
ಜಯರಾಮು ಇಬ್ಬರು ಹೆಣ್ಣು ಮಕ್ಕಳ ಮದುವೆ ಮಾಡಿದ್ದ ಜಯರಾಮು ಅವರು ಎರಡು ಎಕರೆ ಜಮೀನಿನಲ್ಲಿ ಕೃಷಿ ಮಾಡಿಕೊಂಡಿದ್ರು. ಮಕ್ಕಳ ಮದುವೆ ಹಾಗೂ ಕೃಷಿಗೆ ಮೈಕ್ರೋಫೈನಾನ್ಸ್ ನಿಂದ ಸಾಲ ಪಡೆದಿದ್ರು. ಇತ್ತೀಚೆಗೆ ಮೈಕ್ರೋಫೈನಾನ್ಸ್ ಸಿಬ್ಬಂದಿ ಕಿರುಕುಳ, ಸಾಲ ತೀರಿಸಲಾಗದೆ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಹೆಚ್‌ಡಿ ಕೋಟೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ವಿಚಾರಣೆ ನಡೆಯುತ್ತಿದೆ.
PublicNext
04/02/2025 04:58 pm