ಶಿವಮೊಗ್ಗ : ಬಿಪಿಎಲ್ ಪಡಿತರ ಚೀಟಿ ಹೊಂದಿದ ಕುಟುಂಬದ ಸದಸ್ಯರು ಮೃತಪಟ್ಟರೆ ಅಂತ್ಯಸಂಸ್ಕಾರಕ್ಕೆ ಸರ್ಕಾರದಿಂದ ಐದು ಸಾವಿರ ರೂ.ಸಹಾಯಧನ ನೀಡಲಾಗುತ್ತಿತ್ತು. ಆದರೆ ಈ ಯೋಜನೆ ಸ್ಥಗಿತಗೊಂಡಿದೆ. ಈಗ ಸಹಾಯಧನವನ್ನು 10 ಸಾವಿರ ರೂ.ಗೆ ಏರಿಸಿ ಮುಂಬರುವ ಬಜೆಟ್‌ನಲ್ಲಿ ಘೋಷಣೆ ಮಾಡಬೇಕೆಂದು ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ಟ್ರಸ್ಟಿ ಕಲ್ಲೂರು ಮೇಘರಾಜ್ ಮನವಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿಯಾದ ಕಲ್ಲೂರು ಮೇಘರಾಜ್, ಈ ಹಿಂದೆ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದ ಸಂದರ್ಭದಲ್ಲೇ ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು. ಅಂತ್ಯ ಸಂಸ್ಥಾರಕ್ಕೆ ನೀಡುತ್ತಿದ್ದ ಸಹಾಯಧನ ಬಡ ಕುಟುಂಬಗಳಿಗೆ ತಕ್ಕ ಮಟ್ಟಿಗೆ ನೆರವಾಗುತ್ತಿತ್ತು.
ಈಗ ನೆರವು ದೊರೆಯದ ಕಾರಣ ಬಡಕುಟುಂಬಗಳಿಗೆ ಆರ್ಥಿಕ ಹೊರೆ ಎದುರಾಗಿದೆ. ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಸಹಾಯಧನ ಮೊತ್ತವನ್ನು 10 ಸಾವಿರ ರೂ.ಗೆ ಹೆಚ್ಚಳ ಮಾಡಿ ಬಜೆಟ್‌ನಲ್ಲೇ ಜಾರಿಯಾಗುವಂತೆ ಸಿಎಂ ಮೇಲೆ ಒತ್ತಡ ಹೇರಬೇಕೆಂದು ಕಲ್ಲೂರು ಮೇಘರಾಜ್ ಅವರು ರಾಮಲಿಂಗಾ ರೆಡ್ಡಿ ಅವರಲ್ಲಿ ಮನವಿ ಮಾಡಿದರು.
Kshetra Samachara
04/02/2025 05:19 pm