ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ, ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಫೆ.4 ಮ.12 ಗಂಟೆಗೆ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಆಚರಿಸಲಾಯಿತು. ಸವಿತಾ ಮಹರ್ಷಿ ಭಾವಚಿತ್ರಕ್ಕೆ ಎಡಿಸಿ ಬಿಟಿ ಕುಮಾರಸ್ವಾಮಿ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತ್ನಾಡಿದ ಅವರು ಸವಿತಾ ಸಮಾಜ ಬಾಂಧವರು ಶ್ರಮ ಹಾಗೂ ಕಾಯಕ ಜೀವಿಗಳಾಗಿದ್ದಾರೆ. ಆಧುನಿಕ ಯುಗದಲ್ಲಿ ಪ್ರತಿಯೊಬ್ಬರೂ ಸುಂದರವಾಗಿ ಕಾಣುತ್ತಿದ್ದಾರೆ ಎಂದರೆ, ಇದರ ಹಿಂದೆ ಸವಿತಾ ಸಮಾಜದವರ ಶ್ರಮ ಅಡಿಗಿದೆ ಎಂದರು. ಈ ವೇಳೆ ಸಾಹಿತಿ ಹುರಳಿ ಎಂ ಬಸವರಾಜ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ ಸವಿತಾ ಸಮಾಜ ಅಧ್ಯಕ್ಷ ಎನ್.ಚಂದ್ರಶೇಖರ್ ಸೇರಿ ಹಲವರಿದ್ದರು
Kshetra Samachara
04/02/2025 05:24 pm