ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಆಚರಣೆ

ಚಿತ್ರದುರ್ಗ: ನಗರದ ಜಿಲ್ಲಾ ಕ್ರೀಡಾಂಗಣದ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯ 10 ವರ್ಷ ಪೂರ್ಣಗೊಳಿಸಿದ ಪ್ರಯುಕ್ತ “ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮಕ್ಕೆ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿಯೇ ಚಿತ್ರದುರ್ಗ ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಿದ್ದು, ಬಾಲ್ಯವಿವಾಹಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಅಗತ್ಯ ಎಂದರು.ಇದೇ ಸಂದರ್ಭದಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಪ್ರಶಸ್ತಿ ಪ್ರಧಾನ, ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕಗಳನ್ನ ಪಡೆದ ವಿದ್ಯಾರ್ಥಿನಿಯರಿಗೆ ಸನ್ಮಾನ ಮಾಡಲಾಯಿತು. ನಂತರ ವಿದ್ಯಾರ್ಥಿನಿಯರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ ಸೇರಿ ಹಲವರಿದ್ದರು.

Edited By : PublicNext Desk
Kshetra Samachara

Kshetra Samachara

04/02/2025 05:24 pm

Cinque Terre

840

Cinque Terre

0

ಸಂಬಂಧಿತ ಸುದ್ದಿ