", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/41912020250204054406filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಕಳಸ: ಸರಳ ಮತ್ತು ಅರ್ಥಪೂರ್ಣವಾದ ಮಂತ್ರ ಮಾಂಗಲ್ಯ ವಿವಾಹವನ್ನು ಪ್ರೋತ್ಸಾಹಿಸಬೇಕಿದೆ ಎಂದು ಸಿನಿಮಾ ನಟಿ ಪೂಜಾ ಗಾಂಧಿ ಹೇಳಿದರು. ಕಳಸ ತಾಲೂಕಿನ...Read more" } ", "keywords": "Node,Chikmagalur,Public-News", "url": "https://publicnext.com/node" }
ಕಳಸ: ಸರಳ ಮತ್ತು ಅರ್ಥಪೂರ್ಣವಾದ ಮಂತ್ರ ಮಾಂಗಲ್ಯ ವಿವಾಹವನ್ನು ಪ್ರೋತ್ಸಾಹಿಸಬೇಕಿದೆ ಎಂದು ಸಿನಿಮಾ ನಟಿ ಪೂಜಾ ಗಾಂಧಿ ಹೇಳಿದರು. ಕಳಸ ತಾಲೂಕಿನ ಹಿರೇಬೈಲ್ ನಲ್ಲಿ ನಡೆದ ನಂದೀಶ್ ಬಂಕೇನಹಳ್ಳಿ ಮತ್ತು ದೀಕ್ಷಾ ಅವರ ಮಂತ್ರ ಮಾಂಗಲ್ಯ ವಿವಾಹದಲ್ಲಿ ವಿವಾಹ ಸಂಹಿತೆ ಭೋದನೆ ಮಾಡಿ ಮಾತನಾಡಿದರು. ಮಂತ್ರ ಮಾಂಗಲ್ಯವೂ ಕುವೆಂಪು ಅವರ ಪರಿಕಲ್ಪನೆಯ ಒಂದು ಸರಳ ವಿವಾಹ ಪದ್ದತಿಯಾಗಿದೆ. ದುಂದುವೆಚ್ಚ ಮಾಡದೇ ವರದಕ್ಷಿಣೆ ವರದಕ್ಷಿಣೆ ತೆಗೆದುಕೊಳ್ಳದೇ ವಿವಾಹವಾಗಲು ಮಂತ್ರ ಮಾಂಗಲ್ಯ ಸೂಕ್ತ ವಿವಾಹ ಪದ್ದತಿ ಎಂದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರು ಮತ್ತು ಲೇಖಕರಾದ ಪ್ರದೀಪ್ ಕೆಂಜಿಗೆ ಮಾತನಾಡಿ ಮಂತ್ರ ಮಾಂಗಲ್ಯ ವಿವಾಹವನ್ನು ಮಾಡಿಕೊಳ್ಳುವವರು ಕುಟುಂಬಸ್ತರೊಂದಿಗೆ ಅನೇಕ ಸವಾಲುಗಳನ್ನು ಎದುರಿಸಬೇಕಾಗಿದೆ. ವಧು ವರರು ಮನೆ ಮಂದಿಯನ್ನು ಒಪ್ಪಿಸಿ ಮಂತ್ರ ಮಾಂಗಲ್ಯ ಪದ್ದತಿಯಲ್ಲಿ ವಿವಾಹವಾಗುವುದಕ್ಕೆ ಹೆತ್ತವರ ಸಹಕಾರವೂ ಮುಖ್ಯವಾಗುತ್ತದೆ ಎಂದರು.
Kshetra Samachara
04/02/2025 05:45 pm