", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/41912020250204054915filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಕ್ಕಮಗಳೂರು: ಸವಿತಾ ಮಹರ್ಷಿಗಳು ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಮಹಾನ್ ಯುಗ ಪುರುಷ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ...Read more" } ", "keywords": "Node,Chikmagalur,Public-News", "url": "https://publicnext.com/node" }
ಚಿಕ್ಕಮಗಳೂರು: ಸವಿತಾ ಮಹರ್ಷಿಗಳು ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಮಹಾನ್ ಯುಗ ಪುರುಷ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಕುವೆಂಪು ಕಲಾ ಮಂದಿರದ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಲಾಗಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು
ಸವಿತಾ ಮಹರ್ಷಿಗಳು ಸಮಾಜಮುಖಿಯಾಗಿ ಬೆಳೆದು ದಾರಿದೀಪವಾಗಿದ್ದಾರೆ ಇಂತಹ ಮಹಾತ್ಮರ ಜಯಂತಿಗಳನ್ನು ಆಚರಿಸುವ ಮೂಲಕ ಸರ್ಕಾರ ಇವರ ಆದರ್ಶಗಳ ಹಾದಿಯಲ್ಲಿ ನಡೆಯಲು ನಮಗೆ ಬೆಳಕು ತೋರಿಸಿದೆ ಎಂದ ಅವರು ಸವಿತಾ ಸಮಾಜದ ಬಂಧುಗಳು ಮಹರ್ಷಿಗಳ ಆದರ್ಶಗಳನ್ನು ತಮ್ಮ ಜೀವನದಲ್ಲಿ ಆಳವಡಿಸಿಕೊಂಡು ಮುನ್ನೆಡೆಯಬೇಕು ಎಂದು ಹೇಳಿದರು.
ಸವಿತಾ ಸಮಾಜ ಹಿಂದುಳಿದ ಸಮಾಜವಾಗಿದ್ದು, ಸಮಾಜವು ಸಂಘಟನೆಯಿಂದ ಸರಕಾರದ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಬೆಳೆಯಬೇಕು. ಜೊತೆಗೆ ಸಹಕಾರ ಸಂಘಗಳ ಮೂಲಕ, ಆರ್ಥಿಕ ಚಟುವಟಿಕೆಗಳ ಮೂಲಕ ಸಂಘವನ್ನು ಸ್ಥಾಪಿಸಿಕೊಂಡು ಮುಂದೇ ಬರಲು ಪ್ರಯತ್ನಿಸಬೇಕು. ಸವಿತಾ ಸಮಾಜಕ್ಕೆ ಜಾಗವನ್ನು ಮಂಜೂರು ಮಾಡಿಸಲು ಕ್ರಮಕೈಗೊಳ್ಳಲಾಗುವುದು ಎಂದರು.
Kshetra Samachara
04/02/2025 05:51 pm