", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/229640-1738672012-gdfg.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "RuderegowdaGadag" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗದಗ : 15 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿ, ಅದನ್ನು ವಿಡಿಯೋ ಮಾಡಿ ವಿಕೃತಿ ಮೆರೆದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪ...Read more" } ", "keywords": "Gadag News, Minor Girl Abuse, Atrocities Against Minors, Video Recording, Sexual Harassment, Crime News, Karnataka Police, Gadag Crime, Child Abuse, Sexual Assault.,Gadag,Crime,Law-and-Order", "url": "https://publicnext.com/node" }
ಗದಗ : 15 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿ, ಅದನ್ನು ವಿಡಿಯೋ ಮಾಡಿ ವಿಕೃತಿ ಮೆರೆದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸುಲೆಮಾನ್ ಹಾಗೂ ಅಲ್ತಾಫ್ ಎಂಬ ಇಬ್ಬರು ಯುವಕರು ಅಪ್ರಾಪ್ತ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಮೊದಲು ಸುಲೆಮಾನ್ ಎಂಬುವರ ಜೊತೆಗೆ ಇರುವುದನ್ನು ಅಲ್ತಾಫ್ ವಿಡಿಯೋ ಮಾಡಿದ್ದಾನೆ. ನಂತರ ಆ ವಿಡಿಯೋ ಇಟ್ಟುಕೊಂಡು ಅಲ್ತಾಫ್ ಬಾಲಕಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ್ದಾನೆ. ಹೀಗೆ ಇಬ್ಬರು ಅತ್ಯಾಚಾರದ ವಿಡಿಯೋ ಮಾಡಿ ವಿಕೃತಿ ಮೆರೆದಿದ್ದಾರೆ.
ಘಟನೆ 2024 ಡಿಸೆಂಬರ್ ತಿಂಗಳಲ್ಲಿ ನಡೆದಿದೆ. ಮತ್ತೆ ಸಹಕರಿಸದಿದ್ರೆ ಈ ವಿಡಿಯೋ ವೈರಲ್ ಮಾಡುವುದಾಗಿ ಬಾಲಕಿಗೆ ಹೆದರಿಸಿದ್ದಾರೆ. ಇದರಿಂದ ಮನನೊಂದ ಬಾಲಕಿ ನರೇಗಲ್ ಪೊಲೀಸ್ ಠಾಣೆಯಲ್ಲಿ ಜನವರಿ 30 ರಂದು ಇಬ್ಬರ ವಿರುದ್ಧ ದೂರು ನೀಡಿದ್ದಾಳೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ಮುಂದುವರೆದಿದೆ. ಪಾಲಕರಿಗೆ ತಡವಾಗಿ ವಿಷಯ ಗೊತ್ತಾಗಿದೆ. ಈ ಘಟನೆಯಲ್ಲಿ 7 ರಿಂದ 9 ಜನರಿದ್ದರು ಎಂಬ ವದಂತಿ ಇತ್ತು. ಅದಕ್ಕೆ ಎಸ್ಪಿ ಮಾಹಿತಿ ನೀಡಿದ್ದು, ಇದು ಗ್ಯಾಂಗ್ ರೇಪ್ ಅಲ್ಲ. ಸಂತ್ರಸ್ತೆ ಹಾಗೂ ಸುಲೆಮಾನ್ ಸಲುಗೆಯಿಂದ ಇದ್ದಾಗ ಅಲ್ತಾಫ್ ವಿಡಿಯೋ ಮಾಡಿ ಅತ್ಯಾಚಾರ ಮಾಡಿರುವ ಬಗ್ಗೆ ಸ್ವತಃ ಬಾಲಕಿ ಇಬ್ಬರ ವಿರುದ್ಧ ದೂರು ನೀಡಿರುವುದಾಗಿ ಹೇಳ್ತಿದ್ದಾರೆ ಎಸ್.ಪಿ ಬಿ.ಎಸ್ ನೇಮಗೌಡ.
PublicNext
04/02/2025 05:57 pm