ಬೈಂದೂರು: ಕುಂದಾಪುರ ತಾಲೂಕಿನ ತಲ್ಲೂರು ರಾಷ್ಟ್ರೀಯ ಹೆದ್ದಾರಿ 66ರ ಪೆಟ್ರೋಲ್ ಬಂಕ್ ಎದುರುಗಡೆ ಮಂಗಳವಾರ 03-02-2025 ಮಂಗಳವಾರ ಸಂಜೆ 5 ಗಂಟೆಯ ವೇಳೆ ಕಾರು ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ತಲ್ಲೂರು ಪೆಟ್ರೋಲ್ ಬಂಕ್ ಎದುರುಗಡೆ ಸ್ಕೂಟಿ ಮತ್ತು ಕಾರು ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಸ್ಕೂಟರ್ ಸವಾರ ತಲ್ಲೂರು ಹಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುವ ಜಯರಾಮ್ ಶೆಟ್ಟಿ ಎಂದು ತಿಳಿದುಬಂದಿದೆ,
ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ, ಇನ್ನು ಹೆಚ್ಚಿನ ಮಾಹಿತಿ ಪೊಲೀಸ್ ಇಲಾಖೆಯಿಂದ ತಿಳಿಯಬೇಕಾಗಿದೆ.
Kshetra Samachara
04/02/2025 05:58 pm