ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಮಗುವಿನ ಪೋಷಕರ ಪತ್ತೆಗಾಗಿ ಮನವಿ

ಶಿವಮೊಗ್ಗ : ಶಿವಮೊಗ್ಗ ನಗರದ, ಶ್ರೀರಾಂಪುರ ನಗರ, ಮೊದಲ ತಿರುವಿನ ರಸ್ತೆಯ ಪಕ್ಕದಲ್ಲಿ ಕೈಚೀಲದಲ್ಲಿ ಸುಮಾರು 1 ದಿನದ ಗಂಡು ಮಗು ಪತ್ತೆಯಾಗಿದೆ. ಸಾರ್ವಜನಿಕರು ಮಗುವನ್ನು ರಕ್ಷಣೆ ಮಾಡಿ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ಶಿವಮೊಗ್ಗದ ಡಿಸಿಪಿಯು ಘಟಕ ಮತ್ತು ಮಕ್ಕಳ ಸಹಾಯವಾಣಿ ಅಧಿಕಾರಿಗಳು, ಮಕ್ಕಳ ಕಲ್ಯಾಣ ಸಮಿತಿ ದಾಖಲಿಸಿರುತ್ತಾರೆ.

ಮಗುವಿನ ಮುಂದಿನ ಪುನರ್ವಸತಿ ಹಿತದೃಷ್ಠಿಯಿಂದ ಮಗುವಿನ ಸಂಬಂಧಿಕರು ಯಾರಾದರೂ ಇದ್ದಲ್ಲಿ ಅಥವಾ ಪೋಷಕರ ಬಗ್ಗೆ ಮಾಹಿತಿ ದೊರೆತಲ್ಲಿ ಸೂಕ್ತ ದಾಖಲಾತಿಯೊಂದಿಗೆ ಅಧೀಕ್ಷಕರು, ಸರ್ಕಾರಿ ಬಾಲಕರ ಬಾಲಮಂದಿರ, ಆಲ್ಕೊಳ, ಶಿವಮೊಗ್ಗ ಇವರ ಕಛೇರಿಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-295511 ಗೆ ಸಂಪರ್ಕಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

04/02/2025 07:04 pm

Cinque Terre

1.68 K

Cinque Terre

0

ಸಂಬಂಧಿತ ಸುದ್ದಿ