ಉಡುಪಿ: ಸರಕಾರಿ ಬಸ್ ಸೌಲಭ್ಯ ಇಲ್ಲದ ಕುಂದಾಪುರ ತಾಲೂಕಿನ ಆಲೂರು, ಹೊಯ್ಯಾಣ ಕ್ರಾಸ್, ತಾರಿಬೇರು, ಅಕ್ಷಾಲಿಬೆಟ್ಟು ಕೋಣ್ಕಿ, ನಾಡ, ಮೊವಾಡಿ ಗ್ರಾಮಸ್ಥರು ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಇಂದು ಮಣಿಪಾಲದ ಪ್ರಾದೇಶಿಕ ಸಾರಿಗೆ ಕಚೇರಿ ಎದುರು ಧರಣಿ ನಡೆಸಿದರು.
ಧರಣಿಯಲ್ಲಿ ಮಾತನಾಡಿದ ಗ್ರಾಮಸ್ಥರು, ನಾವು ಕೇಳುತ್ತಿರುವ ಮಾರ್ಗದಲ್ಲಿ ಯಾವುದೇ ಬಸ್ಸುಗಳು ಓಡಾಡುತ್ತಿಲ್ಲ. ಇಲ್ಲಿನ ಗ್ರಾಮೀಣ ಪ್ರದೇಶದ ಜನರು ಹಲವಾರು ವರ್ಷಗಳಿಂದ ಬಸ್ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಮಕ್ಕಳು ಶಿಕ್ಷಣಕ್ಕಾಗಿ, ಉದ್ಯೋಗ ಖಾತ್ರಿ ಕೂಲಿಕಾರರು ಪ್ರಯಾಣಕ್ಕೆ ದುಬಾರಿ ವೆಚ್ಚ ನೀಡಿ ಆದಾಯ ಕಳೆದುಕೊಳ್ಳುತ್ತಿದ್ದಾರೆ. ಸಂಬಂಧಪಟ್ಟವರು ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಅರಿತು ಬಸ್ ಸೌಲಭ್ಯ ನೀಡಬೇಕು. ಇಲ್ಲವಾದಲ್ಲಿ ನಿರಂತರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಳಿಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಲಕ್ಷ್ಮೀ ನಾರಾಯಣ ಪಿ. ನಾಯಕ್ ಗ್ರಾಮಸ್ಥರಿಂದ ಮನವಿ ಸ್ವೀಕರಿಸಿದರು. ಕೃಷಿಕೂಲಿಕಾರರ ಸಂಘಟನೆಯ ನಾಗರತ್ನ, ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಾಲಕ್ರಷ್ಣ ಶೆಟ್ಟಿ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
ಐಕಾನ್ - ನಮ್ಮೂರಿಗೆ ಬಸ್ ಬೇಕೇ ಬೇಕು
PublicNext
04/02/2025 07:29 pm