", "articleSection": "Infrastructure,Education,Government,Public News", "image": { "@type": "ImageObject", "url": "https://prod.cdn.publicnext.com/s3fs-public/421698-1738678926-A6~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಕ್ಕಬಳ್ಳಾಪುರ/ಶಿಡ್ಲಘಟ್ಟ : ಸರ್ಕಾರಿ ಶಾಲಾ ಶಿಕ್ಷಕರು ಹಾಗೂ ಎಸ್ಡಿಎಂಸಿ ಸದಸ್ಯರು ಪ್ರತಿಯೊಬ್ಬರು ಮನೆಮನೆಗೂ ಭೇಟಿ ನೀಡಿ ಮಕ್ಕಳನ್ನು ಸರ್ಕಾರಿ...Read more" } ", "keywords": ",Chikkaballapur,Infrastructure,Education,Government,Public-News", "url": "https://publicnext.com/node" }
ಚಿಕ್ಕಬಳ್ಳಾಪುರ/ಶಿಡ್ಲಘಟ್ಟ : ಸರ್ಕಾರಿ ಶಾಲಾ ಶಿಕ್ಷಕರು ಹಾಗೂ ಎಸ್ಡಿಎಂಸಿ ಸದಸ್ಯರು ಪ್ರತಿಯೊಬ್ಬರು ಮನೆಮನೆಗೂ ಭೇಟಿ ನೀಡಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು. ಪೋಷಕರಲ್ಲಿ ಮನವೊಲಿಸುವ ಕೆಲಸ ಮಾಡಬೇಕು ಎಂದು ಕೆಪಿಎಸ್ ಅಧ್ಯಕ್ಷ ಹಾಗೂ ಶಾಸಕ ಬಿ ಎನ್ ರವಿಕುಮಾರ್ ಸಲಹೆ ನೀಡಿದರು.
ಶಿಡ್ಲಘಟ್ಟ ತಾಲೂಕಿನ ಬಶೆಟ್ಟಹಳ್ಳಿ ಕರ್ನಾಟಕ ಪಬ್ಲಿಕ್ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಎಸ್ ಡಿ ಎಂ ಸಿ ಸಮಿತಿ ರಚನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರವು ಬಹಳ ಹಿಂದುಳಿದಿದೆ ಅದರಲ್ಲೂ ಶಿಕ್ಷಣ ಕ್ಷೇತ್ರದಲ್ಲಿ ಪ್ರತಿಯೊಬ್ಬರಿಗೂ ಸರ್ಕಾರಿ ಶಾಲೆಗೆ ಸೇರುವ ಮಕ್ಕಳಿಗೆ ಉಚಿತವಾಗಿ ವಿದ್ಯಾಭ್ಯಾಸವನ್ನು ಕೊಡುವ ಜವಾಬ್ದಾರಿ ನಮ್ಮ ಮೇಲಿರುತ್ತದೆ.
ಸರ್ಕಾರಿ ಶಾಲೆಗಳಿಗೆ ಮಕ್ಕಳು ಹೆಚ್ಚಾಗಿ ಬರಬೇಕು ಅಂದರೆ ಖಾಸಗಿ ಶಾಲೆಗಳಲ್ಲಿ ನೀಡುವ ಶಿಕ್ಷಣಕ್ಕಿಂತ ಹೆಚ್ಚು ಶಿಕ್ಷಣವನ್ನು ಸರ್ಕಾರಿ ಶಿಕ್ಷಕರು ನೀಡಬೇಕು ಎಂದು ಮಕ್ಕಳು ಹಾಗೂ ಪೋಷಕರಲ್ಲಿ ಅರಿವು ಮೂಡಿಸಿ ಮಕ್ಕಳನ್ನು ಹಾಗೂ ಹಾಜರಾತಿಯನ್ನು ಹೆಚ್ಚಿಸಬೇಕು ಅದೇ ರೀತಿ ಶಿಕ್ಷಣವನ್ನು ಸಹ ಕೊಡುವ ಜವಾಬ್ದಾರಿ ನಿಮ್ಮ ಮೇಲಿರುತ್ತದೆ ಎಂದು ಶಿಕ್ಷಕರಿಗೆ ಜವಾಬ್ದಾರಿ ನೀಡಿದರು. ಬಸಿಟ್ಟಳ್ಳಿ ಹೋಬಳಿಗಿ ಸೇರಿರುವ ಕೆಪಿಎಸ್ ಶಾಲೆಯು ಇಡೀ ಜಿಲ್ಲೆಗೆ ಉನ್ನತ ಶಾಲೆಯನ್ನಾಗಿ ರೂಪಿಸಬೇಕು. ಉನ್ನತ ಶಿಕ್ಷಣವನ್ನು ನೀಡಬೇಕು ಎನ್ನುವ ಗುರಿ ನನಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ಜವಾಬ್ದಾರಿ ನಿಮ್ಮ ಮೇಲಿದೆ ಅದಕ್ಕೆ ಬೇಕಾಗುವ ಸಹಕಾರ ನಾನು ನಿರ್ವಹಿಸಲಿದ್ದೇನೆ ಎಂದು ಶಾಸಕರು ತಿಳಿಸಿದರು.
Kshetra Samachara
04/02/2025 07:53 pm