ಬೆಂಗಳೂರು : ನೂತನವಾಗಿ ನೇಮಕವಾದ ರಾಜ್ಯ ಮುಖ್ಯ ಮಾಹಿತಿ ಆಯುಕ್ತರು ಮತ್ತು ರಾಜ್ಯ ಮಾಹಿತಿ ಆಯುಕ್ತರಾಗಿ ನೇಮಕವಾದ 7 ಅಧಿಕಾರಿಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು.
ರಾಜಭವನದ ಗಾಜಿನಮನೆಯಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ರಾಜ್ಯ ಮುಖ್ಯ ಮಾಹಿತಿ ಆಯುಕ್ತರಾಗಿ ನಿವೃತ್ತ ಐಪಿಎಸ್ ಅಧಿಕಾರಿ ಆಶಿತ್ ಮೋಹನ್ ಪ್ರಸಾದ್ ಹಾಗೂ ಶ್ರೀರಾಮನ್. ಕೆ. ಡಾ.ಹರೀಶ್ ಕುಮಾರ್, ರುದ್ರಣ್ಣ ಹರ್ತಿಕೋಟೆ, ನಾರಾಯಣ ಜಿ. ಚಾನ್ನಳ್, ರಾಜಶೇಖರ ಎಸ್, ಬದ್ರುದ್ದೀನ್ ಕೆ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಡಾ.ಮಮತಾ ಬಿ.ಆರ್ ಅವರು ರಾಜ್ಯ ಮಾಹಿತಿ ಆಯುಕ್ತರಾಗಿ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.
PublicNext
04/02/2025 09:41 pm