", "articleSection": "Cultural Activity", "image": { "@type": "ImageObject", "url": "https://prod.cdn.publicnext.com/s3fs-public/286525-1738685658-WhatsApp-Image-2025-02-04-at-9.44.07-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivakumarHaveri" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾವೇರಿ : ಹಾವೇರಿ ಜಿಲ್ಲೆ ರಾಣೆಬೆನ್ನೂರು ಚಿಂತಕರ ವೇದಿಕೆಯಾದ ಪರಿವರ್ತನಾ ಕಳೆದ ಕೆಲ ವರ್ಷಗಳಿಂದ ಕರ್ನಾಟಕ ವೈಭವ ವೈಚಾರಿಕ ಹಬ್ಬ ಆಯೋಜಿಸುತ್ತಾ ...Read more" } ", "keywords": "Haveri, Ranebennuru, Vice President Visit, February 7, Karnataka Politics, Government of Karnataka, Indian Vice President, Official Visit, Haveri District News, Ranebennuru Event.,Cultural-Activity", "url": "https://publicnext.com/node" }
ಹಾವೇರಿ : ಹಾವೇರಿ ಜಿಲ್ಲೆ ರಾಣೆಬೆನ್ನೂರು ಚಿಂತಕರ ವೇದಿಕೆಯಾದ ಪರಿವರ್ತನಾ ಕಳೆದ ಕೆಲ ವರ್ಷಗಳಿಂದ ಕರ್ನಾಟಕ ವೈಭವ ವೈಚಾರಿಕ ಹಬ್ಬ ಆಯೋಜಿಸುತ್ತಾ ಬರುತ್ತಿದೆ. ಪ್ರಸ್ತುತ ವರ್ಷದ ಕರ್ನಾಟಕ ವೈಭವ ಕಾರ್ಯಕ್ರಮ ಇದೇ 7 ರಿಂದ ಮೂರು ದಿನಗಳ ಕಾಲ ನಡೆಯಲಿದೆ ಎಂದು ಕರ್ನಾಟಕ ವೈಭವ ಸ್ವಾಗತ ಸಮಿತಿಯ ಅಧ್ಯಕ್ಷ ಪ್ರೋ.ಎಸ್.ವಿ.ಹಲಸೆ ತಿಳಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಅವರು ಕರ್ನಾಟಕ ವೈಭವ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯದ ರಾಜ್ಯಪಾಲರಾದ ಥಾವರಚೆಂದ್ ಗೆಹ್ಲೋಟ್ ಪಾಲ್ಗೊಳ್ಳಲಿದ್ದಾರೆ ಎಂದು ಪ್ರೋ.ಎಸ್.ವಿ.ಹಲಸೆ ತಿಳಿಸಿದರು. ಇದೇ 7 ರಂದು ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು ಉಪರಾಷ್ಟ್ರಪತಿ ಮತ್ತು ರಾಜ್ಯಪಾಲರ ಕಾರ್ಯಕ್ರಮದಲ್ಲಿ ಹರಿಹರ ಪಂಚಮಸಾಲಿಪೀಠದ ವಚನಾನಂದ ಶ್ರೀಗಳು ಪಾಲ್ಗೊಳ್ಳಲಿದ್ದಾರೆ. ಅಲ್ಲದೆ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಪಾಲ್ಗೊಳ್ಳಲಿದ್ದಾರೆ ಎಂದು ಹಲಸೆ ತಿಳಿಸಿದರು.
ಮೂರು ದಿನಗಳ ಕಾಲ ವಿಶೇಷ ಕಾರ್ಯಕ್ರಮಗಳನ್ನು ಗೋಷ್ಠಿಗಳನ್ನು ಆಯೋಜಿಸಲಾಗಿದೆ. ಚಿಣ್ಣರ ಗೋಷ್ಠಿ,ಯುವಗೋಷ್ಠಿ,ಮಹಿಳಾಗೋಷ್ಠಿ ಮತ್ತು ರೈತಗೋಷ್ಠಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮಗಲ್ಲಿ ವಿವಿಧ ಮಠಾಧೀಶರು ಹಾಸ್ಯಕಲಾವಿದ ಗಂಗಾವತಿ ಪ್ರಾಣೇಶ್, ಚಕ್ರವರ್ತಿ ಸೂಲಿಬೆಲೆ, ಮೈಸೂರು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಸಿಎಂ ಹಾವೇರಿ ಸಂಸದ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
PublicNext
04/02/2025 09:44 pm