ಕಡಬ: ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಬೈಕ್ ಸವಾರರೋರ್ವರು ಗಾಯಗೊಂಡ ಘಟನೆ ಕಡಬ – ಪಂಜ ರಸ್ತೆಯ ಪುಳಿಕುಕ್ಕು ಸಮೀಪ ಮಂಗಳವಾರ ಸಂಜೆ ನಡೆದಿದೆ.
ಕೋಡಿಂಬಾಳ ಗ್ರಾಮದ ಪಟ್ನ ನಿವಾಸಿ ಯಶವಂತ ಎಂಬವರು ಗಾಯಗೊಂಡವರು.
ಪಿಗ್ಮಿ ಕಲೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಯಶವಂತ ಕಡಬ- ಪಂಜ ರಸ್ತೆಯಲ್ಲಿ ಬೈಕ್‌ನಲ್ಲಿ ಬರುತ್ತಿದ್ದಾಗ ಮರ ಅವರ ಮೇಲೆಯೇ ಬಿದ್ದಿದೆ. ಕೆಲ ತಿಂಗಳ ಹಿಂದಷ್ಟೇ ಇದೇ ಪರಿಸರದಲ್ಲಿ ದೂಪದ ಮರವೊಂದು ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಘಟನೆಯ ನೆನಪು ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ಸಂಭವಿಸಿದೆ.
ಸದ್ಯ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಬೈಕ್ ಸವಾರ ಯಶವಂತ ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ. ಈ ವೇಳೆ ಸ್ಥಳೀಯರು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು, ಪೊಲೀಸರಲ್ಲಿ ಅಪಾಯಕಾರಿ ಮರಗಳನ್ನು ತೆರವು ಮಾಡುವಂತೆ ಆಗ್ರಹಿಸಿದ್ದಾರೆ.
PublicNext
04/02/2025 10:40 pm