", "articleSection": "Politics,Law and Order,Government", "image": { "@type": "ImageObject", "url": "https://prod.cdn.publicnext.com/s3fs-public/418299-1738727009-yeccharike.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PralhadBGM" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಮೈಕ್ರೋ ಫೈನಾನ್ಸ್‌ ಕಾಟಕ್ಕೆ ಬೇಸತ್ತಿದ್ದ ಮತ್ತೊಂದು ...Read more" } ", "keywords": "Belagavi, Microfinance Debt, Lakshmi Hebbalkar, Karnataka Minister, Family Assistance, Microfinance Problems, Financial Crisis, Debt Relief, Karnataka News ¹ ².,Belgaum,Politics,Law-and-Order,Government", "url": "https://publicnext.com/node" } ಬೆಳಗಾವಿ: ಮೈಕ್ರೋ ಫೈನಾನ್ಸ್‌ ಕಾಟದಿಂದ ತತ್ತರಿಸಿದ್ದ ಕುಟುಂಬಕ್ಕೆ ನೆರವಾದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಮೈಕ್ರೋ ಫೈನಾನ್ಸ್‌ ಕಾಟದಿಂದ ತತ್ತರಿಸಿದ್ದ ಕುಟುಂಬಕ್ಕೆ ನೆರವಾದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಮೈಕ್ರೋ ಫೈನಾನ್ಸ್‌ ಕಾಟಕ್ಕೆ ಬೇಸತ್ತಿದ್ದ ಮತ್ತೊಂದು ಕುಟುಂಬಕ್ಕೆ ನೆರವಾಗಿದ್ದಾರೆ.

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಸರಿಕಟ್ಟಿಯ ಬಸವರಾಜ ಮಾರುತಿ ಕೊಂಡಸ್ಕೊಪ್ಪ ಅವರು ಖಾಸಗಿ ಹಣಕಾಸು ಸಂಸ್ಥೆಯಿಂದ 7 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದರು. ಸಾಲ ಮರುಪಾವತಿಸಲು ವಿಫಲರಾದ ಹಿನ್ನೆಲೆಯಲ್ಲಿ ಖಾಸಗಿ ಹಣಕಾಸು ಸಂಸ್ಥೆಯವರು 3 ತಿಂಗಳ ಹಿಂದೆ ಬಸವರಾಜ ಅವರ ಮನೆಗೆ ಬೀಗ ಹಾಕಿದ್ದರು. ಮೈಕ್ರೋ ಫೈನಾನ್ಸ್‌ ಅವರ ಕಾಟಕ್ಕೆ ಬೇಸತ್ತ ಬಸವರಾಜ ಸಚಿವರ ಬಳಿಕ ತಮ್ಮ ಅಳಲು ತೋಡಿಕೊಂಡಿದ್ದರು. ನೊಂದ ರೈತನ ಮನವಿ ಸ್ವೀಕರಿಸಿದ ಸಚಿವರು, ತಮ್ಮ ಆಪ್ತ ಸಹಾಯಕ ಮಹಾಂತೇಶ್ ಹಿರೇಮಠ ಮೂಲಕ ಖಾಸಗಿ ಹಣಕಾಸು ಸಂಸ್ಥೆ ಸಿಬ್ಬಂದಿ ಜೊತೆ ಮಾತುಕತೆ ನಡೆಸಿ, ಸಾಲ ಮರು ಪಾವತಿಸಲು ಎರಡು ತಿಂಗಳ ಸಮಯಾವಕಾಶ ಕೊಡಿಸಿದರು. ಜೊತೆಗೆ ಅನಾವಶ್ಯಕವಾಗಿ ಸಾಲಗಾರರಿಗೆ ಕಾಟ ನೀಡದಂತೆ ಖಾಸಗಿ ಹಣಕಾಸು ಸಂಸ್ಥೆಯವರಿಗೆ ಸಚಿವರು ತಾಕೀತು ಮಾಡಿದರು.

ಕಳೆದ ವಾರವಷ್ಟೇ ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದ ಮಾಧುರಿ ಲೋಹಾರ್ ಎನ್ನುವ ಬಾಣಂತಿ ಮತ್ತು ಅವರ ಕುಟುಂಬದವರು ಸಾಲ ತೀರಿಸಿಲ್ಲ ಎಂದು ಆರೋಪಿಸಿ ಖಾಸಗಿ ಹಣಕಾಸು ಸಂಸ್ಥೆಯವರು ಬಾಣಂತಿ ಸೇರಿದಂತೆ ಕುಟುಂಬ ಸದಸ್ಯರನ್ನು ಮನೆಯಿಂದ ಹೊರಹಾಕಿದ್ದರು. ಈ ವೇಳೆ ಮಧ್ಯಪ್ರವೇಶಿಸಿದ ಸಚಿವರು, ಸಾಲ ಮರುಪಾವತಿಸಲು ಸಮಯಾವಕಾಶ ಕೊಡಿಸಿದ್ದಲ್ಲದೆ, ಮನೆಯ ಬೀಗ ತೆರವು ಮಾಡಿಸಿದ್ದರು.

Edited By : Ashok M
PublicNext

PublicNext

05/02/2025 09:13 am

Cinque Terre

8.81 K

Cinque Terre

0

ಸಂಬಂಧಿತ ಸುದ್ದಿ