", "articleSection": "Others", "image": { "@type": "ImageObject", "url": "https://prod.cdn.publicnext.com/s3fs-public/34909020250205092838filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Nandeesh Annigere" }, "editor": { "@type": "Person", "name": "109832198824916712733" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಅಣ್ಣಿಗೇರಿ : ಆಧುನಿಕ ಜಗತ್ತಿನಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಸ್ಕೃತಿಯ ಗುಣಗಳು ಅತ್ಯವಶ್ಯಕವಾಗಿವೆ. ವಿದ್ಯಾರ್ಥಿಗಳು ಉತ್ತಮ ಅಂ...Read more" } ", "keywords": "Node,Hubballi-Dharwad,Others", "url": "https://publicnext.com/node" }
ಅಣ್ಣಿಗೇರಿ : ಆಧುನಿಕ ಜಗತ್ತಿನಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಸ್ಕೃತಿಯ ಗುಣಗಳು ಅತ್ಯವಶ್ಯಕವಾಗಿವೆ. ವಿದ್ಯಾರ್ಥಿಗಳು ಉತ್ತಮ ಅಂಕಗಳ್ನು ಗಳಿಸುವ ಮೂಲಕ ತಮ್ಮ ಜೀವನದಲ್ಲಿ ಅತ್ಯುನ್ನತ ಸ್ಥಾನವನ್ನು ಅಲಂಕರಿಸಿ ಕಲಿತ ಶಿಕ್ಷಣ ಸಂಸ್ಥೆಗೆ ಹಾಗೂ ಕಲಿಸಿದ ಗುರುಗಳಿಗೆ ಗೌರವವನ್ನು ತಂದು ಕೊಡುವಲ್ಲಿ ಮುಂದಾಗಬೇಕು ಎಂದು ಕನ್ನಡ ಚಿತ್ರರಂಗದ ಹಿರಿಯ ನಟ ಶ್ರೀನಿವಾಸ ಮೂರ್ತಿ ಹೇಳಿದರು.
ಅವರು ಸ್ಥಳೀಯ ಬಾಪೂಜಿ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ಹಮ್ಮಿಕೊಂಡ ಬಾಪೂಜಿ ಉತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.ಗ್ರಾಮೀಣ ಭಾಗದ ಮಕ್ಕಳಿಗೆ ಅತೀ ಕಡಿಮೆ ಮೊತ್ತದಲ್ಲಿ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿರುವ ಬಾಪೂಜಿ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ. ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸಂಸ್ಥೆಯ ವಿದ್ಯಾರ್ಥಿಗೆ ಉಚಿತ ಲ್ಯಾಪ ಟಾಪ್ ನೀಡುತ್ತಿರುವ ಯೋಜನೆ ಹಮ್ಮಿಕೊಂಡಿರುವದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಹಕವಾಗಿದೆ.ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಗುಣಮಟ್ಟದ ಶಿಕ್ಷಣವನ್ನು ಆಲಿಸುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬೆಳೆಯಬೇಕೆನ್ನುವದು ಪ್ರತಿಯೊಬ್ಬರ ಆಸೆಯಾಗಿದೆ ಎಂದು ಸಲಹೆ ನೀಡಿದರು.
ಶಾಸಕ ಕೋನರಡ್ಡಿ ಮಾತನಾಡಿ,ಬಾಪೂಜಿ ಶಿಕ್ಷಣ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ಇಂದು ವಿವಿಧ ರಾಜ್ಯಗಳಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿ ಕರ್ತವ್ಯ ನಿರ್ವಹಿಸುತ್ತಿರುವುದು ತುಂಬಾ ಸಂತೋಷವನ್ನುಟು ಮಾಡಿದೆ. ಸಮಾಜಕ್ಕೆ ಬಾಪೂಜಿ ಶಿಕ್ಷಣ ಸಂಸ್ಥೆಯ ಕಾರ್ಯ ಅನನ್ಯವಾಗಿದೆ.ಮುಂದಿನ ವರ್ಷ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಿರುವ ೨೫ನೇ ವರ್ಷದ ಕಾರ್ಯಕ್ರಮಕ್ಕೆ ಎಲ್ಲ ಹಳೇ ವಿದ್ಯಾರ್ಥಿಗಳನ್ನು ಒಂದುಗೂಡಿಸಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸುವಂತೆ ಸಂಸ್ಥೆಯ ಆಡಳಿತ ವರ್ಗಕ್ಕೆ ಶಾಸಕ ಕೋನರಡ್ಡಿ ಮನವಿ ಮಾಡಿದರು.ಬಾಪೂಜಿ ಶಿಕ್ಷಣ ಸಂಸ್ಥೆಯ ಜೀರ್ಣೋದ್ಧಾರಕ್ಕೆ ನಾನು ಕೂಡಾ ಆರ್ಥಿಕವಾಗಿ ಕೈ ಜೋಡಿಸುತ್ತೇನೆ ಎಂದು ಭರವಸೆ ನೀಡಿದರು.
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ದ್ವಿತೀಯ ವರ್ಷದ ವಾರ್ಷಿಕ ಪರೀಕ್ಷೆ ಅತೀ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ರಾಜ್ಯ ಹಾಗೂ ರಾಷ್ಟ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಂಸ್ಥೆವತಿಯಿದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ನಂತರ ಸಂಸ್ಥೆಯ ಮಕ್ಕಳಿಂದ ಬಾಪೂಜಿ ಉತ್ಸವ ಸಡಗರ ಸಂಬ್ರಮದಿದ ಜರುಗಿ ಪಾಲಕರ ಗಮನ ಸೆಳೆದವು.
ಈ ಸಂದರ್ಭದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಎ.ಐ.ನಡಕಟ್ಟಿನ, ಡಾ.ಎ.ಡಿ.ಧಾರವಾಡ, ಷಣ್ಮುಖ ಗುರಿಕಾರ, ಮುಖ್ಯಾಧಿಕಾರಿ ವೈ.ಜಿ.ಗದ್ದಿಗೌಡರ, ಎನ್.ಡಿ.ಧಾರವಾಡ, ಶಿವಾನಂದ ಗುಂಜಾಳ, ಅಲೋಕಗೌಡ ನಾಯ್ಕರ, ಡಾ.ಮೇಘನಾ ಪಾಟೀಲ, ಪವನ ಕರವೀರಮಠ, ಬಸವಣ್ಣೆವ್ವ ದಿಡ್ಡಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
Kshetra Samachara
05/02/2025 09:28 am