ಚಿಕ್ಕಮಗಳೂರು: ಗಣರಾಜ್ಯೋತ್ಸವದ ಅಂಗವಾಗಿ ಜನವರಿ 26ರಂದು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಸರ್ವಧರ್ಮ ಸಮನ್ವಯ ವೇದಿಕೆ ವತಿಯಿಂದ ನಡೆದ ಕಾರ್ಯಕ್ರಮ ಪರ ವಿರೋಧದ ಚರ್ಚೆಗೆ ಗ್ರಾಸವಾಗಿದೆ.
ಈ ಕುರಿತು ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿದ ವಕೀಲ ಹಾಗೂ ಬಿಎಸ್ಪಿ ಜಿಲ್ಲಾಧ್ಯಕ್ಷ ಪರಮೇಶ್ವರ್, ಕಾರ್ಯಕ್ರಮಕ್ಕೆ ಜಿಲ್ಲಾ ವಕೀಲರ ಸಂಘ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ನಡೆಸಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದ್ದು. ಈ ಕುರಿತು ವಕೀಲರ ಸಂಘಕ್ಕೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾ ನ್ಯಾಯಾಧೀಶರ ಬಳಿ ಈ ಕುರಿತು ಮಾಹಿತಿ ಪಡೆದಾಗ ನಾವು ಯಾವುದೇ ಸಹಕಾರ ನೀಡಿಲ್ಲವೆಂದು ತಿಳಿಸಿದ್ದಾರೆ.
ಈ ಕುರಿತು ಸ್ಥಳೀಯ ವಾಹಿನಿಯಲ್ಲಿ ಪ್ರಸಾರವಾಗಿರುವ ವಿಡಿಯೋ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡಿರುವ ಕುರಿತು ದಾಖಲೆಗಳನ್ನು ಇರುವಂತೆ ಜಿಲ್ಲಾ ನ್ಯಾಯಾಧೀಶರು ಕೇಳಿದ್ದು ಇದನ್ನು ನಾವು ಅವರಿಗೆ ಸಲ್ಲಿಸಿದ್ದೇವೆ. ಇದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಹಾಸನದ ನ್ಯಾಯಾಧೀಶರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅಪಮಾನ ಮಾಡುವ ರೀತಿ ಮಾತಾಡಿರುವುದಕ್ಕೆ ಹಾಸನ ಆಡಳಿತಾತ್ಮಕ ನ್ಯಾಯಮೂರ್ತಿಗಳಿಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ದೂರನ್ನು ನೀಡಿದ್ದೇವೆ, ಇಷ್ಟೆಲ್ಲ ಆದ ಬಳಿಕ ಕೆಲವರು ವಿಡಿಯೋವನ್ನು ತಿರುಚಿದ್ದೇವೆ ಎನ್ನುತ್ತಿದ್ದಾರೆ. ಓಬ್ಬ ನ್ಯಾಯಾಧೀಶರ ಮೇಲೆ ಸುಳ್ಳು ಆರೋಪ ಮಾಡಿದರೆ ಅದರ ಪರಿಣಾಮ ಏನಾಗುತ್ತದೆ ಎಂಬುದು ನಮಗೆ ಗೊತ್ತಿದೆ, ಬಿಎಸ್ಪಿ, ದಲಿತ ಸಂಘಟನೆಯ ಮುಖಂಡರು ಯಾರು ತಿಳುವಳಿಕೆ ಇಲ್ಲದವರಲ್ಲ ಎಂದು ಪರಮೇಶ್ವರ್ ಪಬ್ಲಿಕ್ ನೆಕ್ಸ್ಟ್ ಗೆ ಪ್ರತಿಕ್ರಿಯೆ ನೀಡಿದ್ದಾರೆ.
Kshetra Samachara
05/02/2025 09:55 am