ಬೆಳಗಾವಿ: ಸಿಎಂ ಬದಲಾವಣೆ ಆಗಲ್ಲ, ಸಿಎಂ ಆಗಿ ಸಿದ್ದರಾಮಯ್ಯ ಅವರೇ ಇರುತ್ತಾರೆ ಎಂದು ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.
ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಬದಲಾವಣೆ ಆಗುತ್ತಾರೆ ಎಂದು ಮಾಧ್ಯಮದವರೇ ನೀವೇ ಜಾಸ್ತಿ ತೋರಿಸ್ತಿದೀರಾ. ಸಿಎಂ ಅವರು ಚೆನ್ನಾಗಿ ಸರ್ಕಾರ ನಡೆಸುತ್ತಿದ್ದಾರೆ. ಅವರ ಬದಲಾವಣೆ ಪ್ರಶ್ನೆನೆ ಇಲ್ಲ. ನಾವು ಒಳ್ಳೆ ಕಾರ್ಯಕ್ರಮ ಕೊಟ್ಟಿದ್ದೇವೆ. ಮುಂದೆ ಬಜೆಟ್ ಇದೆ, ಸಿಎಂ ಅವರು ಒಳ್ಳೆಯ ಬಜೆಟ್ ನೀಡುತ್ತಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದರು.
ಡಿಸಿಎಂ ಡಿಕೆಶಿ ಪರ ಕಾರ್ಯಕರ್ತರು ಮುಂದಿನ ಸಿಎಂ ಡಿಕೆಶಿ ಘೋಷಣೆ ವಿಚಾರವಾಗಿ ಮಾತನಾಡಿದ ಅವರು, ಅವರು ಈಗಾಗಲೇ ಕೆಪಿಸಿಸಿ ಅಧ್ಯಕ್ಷರಾಗಿ ಹಾಗೂ ಡಿಸಿಎಂ ಆಗಿ ಕೆಲಸ ಮಾಡುತ್ತಿದ್ದಾರೆ. ಆ ಪ್ರಶ್ನೆ ನಮ್ಮ ಮುಂದೆ ಇಲ್ಲ. ಸಿಎಂ ಬದಲಾವಣೆ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವಾಗಿದೆ. ನಾವು ಯಾರು ಕೂಡ ಅದರ ಬಗ್ಗೆ ಪ್ರಸ್ತಾಪ ಮಾಡಲ್ಲ ಎಂದರು.
ವಿಪಕ್ಷ ನಾಯಕ ಆರ್. ಅಶೋಕ್ ಸಿಎಂ ಬದಲಾವಣೆ ಆಗುತ್ತಾರೆ ಎಂಬ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅದು ಹೇಳೋರಿಗೆ ಗೊತ್ತು, ನನಗೆ ಗೊತ್ತಿಲ್ಲ ಎಂದು ಸಚಿವ ಮುನಿಯಪ್ಪ ಹೇಳಿದರು.
PublicNext
05/02/2025 11:58 am