", "articleSection": "Infrastructure,Government", "image": { "@type": "ImageObject", "url": "https://prod.cdn.publicnext.com/s3fs-public/222042-1738743669-Add-a-heading---2025-02-05T134844.017.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SiddharthBng" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: 2025ನೇ ಸಾಲಿನ ಏರ್ ಶೋ ಯಲಹಂಕ ವಾಯುಪಡೆ ನಿಲ್ದಾಣದಲ್ಲಿ ಫೆಬ್ರವರಿ 10ರಿಂದ 14ರವರೆಗೆ ನಡೆಯಲಿರುವ ಹಿನ್ನಲೆ ಕೆಂಪೇಗೌಡ ಏರ್‌ಪೋರ್ಟ್...Read more" } ", "keywords": "Bengaluru, flight operations, air travel, flight schedule, Kempegowda International Airport, KIA, Bengaluru airport, flight disruptions, February 14. ,Bangalore,Bangalore-Rural,Infrastructure,Government", "url": "https://publicnext.com/node" }
ಬೆಂಗಳೂರು: 2025ನೇ ಸಾಲಿನ ಏರ್ ಶೋ ಯಲಹಂಕ ವಾಯುಪಡೆ ನಿಲ್ದಾಣದಲ್ಲಿ ಫೆಬ್ರವರಿ 10ರಿಂದ 14ರವರೆಗೆ ನಡೆಯಲಿರುವ ಹಿನ್ನಲೆ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ವಿಮಾನ ಹಾರಾಟ ವ್ಯತ್ಯಯ ಆಗಲಿದೆ. ಇಂದಿನಿಂದ 14ರ ವರೆಗೆ ಪ್ರತಿದಿನ ಕೆಲವು ಗಂಟೆಗಳ ಕಾಲ ವ್ಯತ್ಯಯ ಉಂಟಾಗಲಿದೆ. ಒಟ್ಟು 47 ಗಂಟೆಗಳ ಕಾಲ ವಿಮಾನಯಾನದಲ್ಲಿ ಅಡಚಣೆ ಉಂಟಾಗಲಿದೆ.
ಈ ಬಗ್ಗೆ X ಮೂಲಕ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ನಿಗದಿತ ಅವಧಿಯಲ್ಲಿ ಪ್ರತಿದಿನ ಕೆಲವು ಗಂಟೆಗಳ ಕಾಲ ವಾಯು ಪ್ರದೇಶವನ್ನು ಕ್ಲೋಸ್ ಮಾಡಲಾಗುತ್ತದೆ. ಹೀಗಾಗಿ ವಿಮಾನಗಳ ಕಾರ್ಯಾಚರಣೆಗಳು ವ್ಯತ್ಯಯವಾಗಬಹುದು. ಪ್ರಯಾಣಿಕರು ತಮ್ಮ ನಿಗದಿತ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಬಹುದೆಂದು ಪೋಸ್ಟ್ ಮಾಡಲಾಗಿದೆ.
ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಸಮಯ ಹೀಗಿದೆ
ಫೆಬ್ರವರಿ 5 ಮತ್ತು 8ರ ವರೆಗೆ
ಬೆಳಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ
ಮಧ್ಯಾಹ್ನ 2 ರಿಂದ ಸಂಜೆ 5ರವರೆಗೆ ವ್ಯತ್ಯಯ ಆಗಲಿದೆ
ಫೆಬ್ರವರಿ 9 ರಂದು ವ್ಯತ್ಯಯದ ಸಮಯ
ಬೆಳಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ವ್ಯತ್ಯಯ
ಫೆಬ್ರವರಿ 10 ರಂದು ವ್ಯತ್ಯಯ
ಬೆಳಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ
ಮಧ್ಯಾಹ್ನ 2 ರಿಂದ ಸಂಜೆ 4 ರವರೆಗೆ ವಿಮಾನ ಹಾರಾಟದಲ್ಲಿ ವ್ಯತ್ಯಯ
ಫೆಬ್ರವರಿ 11, 12 ರಂದು ವ್ಯತ್ಯದ ಸಮಯ
ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರವರೆಗೆ ವ್ಯತ್ಯಯ
ಫೆಬ್ರವರಿ 13 ಮತ್ತು 14ರ ಸಮಯ
ಬೆಳಗ್ಗೆ 9 ರಿಂದ ಮಧ್ಯಾಹ್ನ 12ರ ವರೆಗೆ
ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ವಿಮಾನ ಹಾರಾಟದಲ್ಲಿ ವ್ಯತ್ಯಯ
PublicNext
05/02/2025 01:52 pm