", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/418299-1738746008-SABHE.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Rahim Ujire Udupi" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೈಂದೂರು: ಬೈಂದೂರು ಏತ ನೀರಾವರಿ ಸಭೆಯಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ಕಂಬದಕೋಣೆ ಗ್ರಾಮ ಪಂಚಾಯತ...Read more" } ", "keywords": ",Udupi,Mangalore,Crime,Law-and-Order", "url": "https://publicnext.com/node" }
ಬೈಂದೂರು: ಬೈಂದೂರು ಏತ ನೀರಾವರಿ ಸಭೆಯಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೇರಂಜಾಲು ಏತನೀರಾವರಿ ಯೋಜನೆ ವೈಫಲ್ಯ ಕಂಡಿದ್ದು ಸ್ಥಳೀಯ ರೈತರಿಗೆ ಆಗುತ್ತಿರುವ ಸಮಸ್ಯೆ ಕುರಿತು ಸಭೆ ನಡೆಯುತ್ತಿತ್ತು. ಸಭೆ ನಡೆಯುತ್ತಿದ್ದಾಗ ಮಾತಿಗೆ ಮಾತು ಬೆಳೆದು ಎರಡು ತಂಡಗಳ ನಡುವೆ ಹೊಯ್ ಕೈಯ್ ನಡೆದಿದೆ.
ಇಲ್ಲಿನ ಹೇರಂಜಾಲು ಶ್ರೀ ದುರ್ಗಾ ಗಣೇಶೋತ್ಸವ ವೇದಿಕೆಯಲ್ಲಿ ಸಭೆ ಆಯೋಜನೆಗೊಂಡಿತ್ತು. ಏತ ನೀರಾವರಿ ಯೋಜನೆ ಅವೈಜ್ಞಾನಿಕವಾಗಿರುವುದರಿಂದ ಸ್ಥಳೀಯ ರೈತರಿಗೆ ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತವಾಯಿತು.
ಈ ವೇಳೆ ಇನ್ನೊಂದು ತಂಡವು ಮೈಕ್ ಕಸಿದು ರಂಪಾಟ ನಡೆಸಿದ್ದು ತಳ್ಳಾಟ ಹೊಡೆದಾಟ ನಡೆದಿದೆ. ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ, ರೈತ ಮುಖಂಡ ಎಸ್.ಪ್ರಕಾಶ್ಚಂದ್ರ ಶೆಟ್ಟರಿಂದ ಮೈಕ್ ಕಸಿದು ಎಳೆದಾಟ ನಡೆಸಿದರು. ಸಭೆಯಲ್ಲಿ ಎರಡು ತಂಡಗಳ ನಡುವೆ ತಳ್ಳಾಟ, ನೂಕಾಟದಿಂದಾಗಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಪೊಲೀಸರು ಮಧ್ಯ ಪ್ರವೇಶ ಮಾಡಿ ಸಕಾಲದಲ್ಲಿ ಗಲಾಟೆ ನಿಲ್ಲಿಸಿದರು.
PublicNext
05/02/2025 02:30 pm