", "articleSection": "Agriculture", "image": { "@type": "ImageObject", "url": "https://prod.cdn.publicnext.com/s3fs-public/41912020250205032726filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‌ಗೆ ರೂ. 5,650 ರಂ...Read more" } ", "keywords": "Node,Chikmagalur,Agriculture", "url": "https://publicnext.com/node" }
ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‌ಗೆ ರೂ. 5,650 ರಂತೆ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಇತ್ತೀಚಿಗೆ ನಡೆದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರ ಆದೇಶ ಹೊರಡಿಸಿದ ದಿನದಿಂದ ಖರೀದಿ ಕೇಂದ್ರಗಳಲ್ಲಿ ರೈತರ ಅಗತ್ಯ ದಾಖಲೆಗಳೊಂದಿಗೆ ನೋಂದಣಿಯನ್ನು ಮಾಡಿಕೊಳ್ಳಲಾಗುತ್ತದೆ.
ರೈತರ ನೋಂದಣಿ ಕಾಲಾವಧಿಯನ್ನು 22 ಏಪ್ರಿಲ್ 2025ರ ವರೆಗೆ ನಿಗಧಿಪಡಿಸಲಾಗಿದೆ. ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಸರ್ಕಾರಿ ರಜಾ ದಿನಗಳನ್ನು ಹೊರತು ಪಡಿಸಿ ಉಳಿದ ದಿನಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಕಡಲೆಕಾಳು ಉತ್ಪನ್ನಗಳನ್ನು ಖರೀದಿಸಲಾಗುವುದು ಎಂದರು. ಕಡಲೇಕಾಳು ಪ್ರತಿ ಎಕರೆಗೆ ನಾಲ್ಕು ಕ್ವಿಂಟಾಲ್‌ನಂತೆ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಪ್ರಮಾಣದ ಎಫ್‌ಎಕ್ಯೂ ಗುಣಮಟ್ಟದ ಕಡಲೆಕಾಳು ಖರೀದಿಸಲಾಗುವುದು ಎಂದು ತಿಳಿಸಿದರು.
Kshetra Samachara
05/02/2025 03:27 pm