", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/416809_1738751502_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SantoshHassan" }, "editor": { "@type": "Person", "name": "8749017705" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾಸನ: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಸನ ಕೃಷಿ ಕಾಲೇಜನ್ನು ಬೆಂಗಳೂರು ವಿಶ್ವ ವಿದ್ಯಾನಿಲಯದ ವ್ಯಾಪ್ತಿಯಲ್ಲೇ ಉಳಿಸಬೇಕು ಎಂದು ಮಾಜಿ ಸಚಿವ ಎಚ...Read more" } ", "keywords": "Node,Hassan,News Hassan: Agriculture college should remain under Bangalore University - H.D Revanna,News", "url": "https://publicnext.com/node" } ಹಾಸನ : ಕೃಷಿ ಕಾಲೇಜು ಬೆಂಗಳೂರು ವಿವಿ ವ್ಯಾಪ್ತಿಯಲ್ಲೇ ಉಳಿಯಲಿ - H.D ರೇವಣ್ಣ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ : ಕೃಷಿ ಕಾಲೇಜು ಬೆಂಗಳೂರು ವಿವಿ ವ್ಯಾಪ್ತಿಯಲ್ಲೇ ಉಳಿಯಲಿ - H.D ರೇವಣ್ಣ

ಹಾಸನ: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಸನ ಕೃಷಿ ಕಾಲೇಜನ್ನು ಬೆಂಗಳೂರು ವಿಶ್ವ ವಿದ್ಯಾನಿಲಯದ ವ್ಯಾಪ್ತಿಯಲ್ಲೇ ಉಳಿಸಬೇಕು ಎಂದು ಮಾಜಿ ಸಚಿವ ಎಚ್ಡಿ ರೇವಣ್ಣ ಒತ್ತಾಯಿಸಿದ್ದಾರೆ.

ಹಾಸನ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಐತಿಹಾಸಿಕ ಹಿನ್ನೆಲೆ ಹೊಂದಿರುವ ಬೆಂಗಳೂರು ವಿಶ್ವ ವಿದ್ಯಾಲಯದ ಅಡಿಯಲ್ಲಿ ಕೃಷಿ ಕಾಲೇಜು ಇರುವುದರಿಂದ ವಿಧ್ಯಾರ್ಥಿಗಳಿಗೆ ಅನುಕೂಲ ಆಗಲಿವೆ. ಆದುದರಿಂದ ಜಿಲ್ಲೆಯ ಜೆಡಿಎಸ್ ನ ನಾಲ್ವರು ಶಾಸಕರು ಮುಖ್ಯಮಂತ್ರಿ ಸೇರಿ ಸಂಭಂದಿಸಿದ ಇಲಾಖೆ ಸಚಿವರು ಹಾಗೂ ಅಧಿಕಾರಿಗಳಿಗೆ ಈಗಾಗಲೇ ಮನವಿ ಸಲ್ಲಿಸಲಾಗಿದೆ ಎಂದರು.

ಹಾಸನ ಕೃಷಿ ಕಾಲೇಜು ಬೆಂಗಳೂರು ವಿಶ್ವ ವಿದ್ಯಾಲಯದ ವ್ಯಾಪ್ತಿಯಲ್ಲಿ ಇರುವುದರಿಂದ ವಿದ್ಯಾರ್ಥಿಗಳ ಓಡಾಟಕ್ಕೆ ಅನುಕೂಲ ಆಗಲಿದೆ, ಪ್ರತಿಷ್ಟಿತ ವಿಶ್ವ ವಿದ್ಯಾನಿಲಯವಾಗಿ ಗುರುತಿಸಿಕೊಂಡಿರುವ ಬೆಂಗಳೂರು ವಿವಿ ಯನ್ನು ವಿಭಾಗ ಮಾಡುವ ಕೆಲಸ ಮಾಡಬಾರದು, ಇದನ್ನು ರಾಜಕೀಯವಾಗಿ ತೆಗೆದುಕೊಂಡರೆ ಇದರ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಹಾಸನದ ಸೋಮನಹಳ್ಳಿ ಕಾವಲು ಜಾಗದಲ್ಲಿ 250 ಎಕರೆ ಜಾಗದಲ್ಲಿ ತೋಟಗಾರಿಕೆ ವಿವಿ ಮಾಡಲು ಹೊರಟಾಗ ಅದಕ್ಕೂ ಅಡ್ಡಿ ಪಡಿಸಿದರು, ಇದಲ್ಲದೆ ಹಾಸನದಲ್ಲಿ 760 ಅಂಗನವಾಡಿ ಹುದ್ದೆಗಳು ಖಾಲಿ ಇವೆ, ಜಿಲ್ಲಾಡಳಿತ ಸಂದರ್ಶನ ಹಾಗೂ ನೇಮಕಾತಿಗೆ ಅವಕಾಶ ನೀಡುತ್ತಿಲ್ಲ, ಹೋರ ಗುತ್ತಿಗೆ ನೌಕರರಿಗೆ, ಬೋಧಕ ಬೋಧಕೇತರ ಸಿಬ್ಬಂದಿಗಳು, ಸೇರಿದಂತೆ ಹಲವರಿಗೆ ಕಳೆದ ಮೂರ್ನಾಲ್ಕು ತಿಂಗಳಿನಿಂದ ಸಂಬಳ ಕೊಟ್ಟಿಲ್ಲ ಎಂದು ದೂರಿದರು.

Edited By : PublicNext Desk
PublicNext

PublicNext

05/02/2025 04:01 pm

Cinque Terre

5.83 K

Cinque Terre

0

ಸಂಬಂಧಿತ ಸುದ್ದಿ