", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/387839-1738751644-WhatsApp-Image-2025-02-05-at-2.53.27-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshShimogga" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ : ಕೈಗಾರಿಕಾ ಪ್ರದೇಶಗಳಲ್ಲಿ ಕುಡಿಯುವ ನೀರು, ಬೀದಿ ದೀಪ, ಯುಜಿಡಿ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಿ, ಹಂತ ಹಂತವಾಗಿ ಅಭಿವ...Read more" } ", "keywords": "Shivamogga, Industrial Development, Infrastructure Growth, Basic Amenities, Karnataka News, Economic Growth, Investment Opportunities, Gurudatta Hegde, Industrial Estates.,Shimoga,Government", "url": "https://publicnext.com/node" } ಶಿವಮೊಗ್ಗ : ಕೈಗಾರಿಕಾ ಪ್ರದೇಶಗಳಲ್ಲಿ ಹಂತ ಹಂತವಾಗಿ ಮೂಲಭೂತ ಸೌಕರ್ಯಗಳ ಅಭಿವೃದ್ದಿ - ಗುರುದತ್ತ ಹೆಗಡೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಕೈಗಾರಿಕಾ ಪ್ರದೇಶಗಳಲ್ಲಿ ಹಂತ ಹಂತವಾಗಿ ಮೂಲಭೂತ ಸೌಕರ್ಯಗಳ ಅಭಿವೃದ್ದಿ - ಗುರುದತ್ತ ಹೆಗಡೆ

ಶಿವಮೊಗ್ಗ : ಕೈಗಾರಿಕಾ ಪ್ರದೇಶಗಳಲ್ಲಿ ಕುಡಿಯುವ ನೀರು, ಬೀದಿ ದೀಪ, ಯುಜಿಡಿ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಿ, ಹಂತ ಹಂತವಾಗಿ ಅಭಿವೃದ್ದಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಕೈಗಾರಿಕಾ ಸ್ಪಂದನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯ ಕೈಗಾರಿಕಾ ಪ್ರದೇಶಗಳನ್ನು ಹಂತ ಹಂತವಾಗಿ ಅಭಿವೃದ್ದಿಪಡಿಸಲಾಗುತ್ತಿದೆ. ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿದಂತೆ ಪ್ರಸ್ತುತ ಇರುವ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಕುಡಿಯುವ ನೀರು, ಬೀದಿ ದೀಪ, ಯುಜಿಡಿ, ತ್ಯಾಜ್ಯ ನಿರ್ವಹಣೆಯನ್ನು ಪಾಲಿಕೆ, ಸ್ಥಳೀಯ ಸಂಸ್ಥೆಗಳ ಸಮನ್ವಯದೊಂದಿಗೆ ನಿರ್ವಹಿಸಲಾಗುವುದು ಎಂದರು.

ಕೈಗಾರಿಕಾ ಸಂಘಗಳ ಅಧ್ಯಕ್ಷರು, ಶಾಹಿ ಎಕ್ಸ್ಪೋರ್ಟ್ಸ್ ನ ಅಪಾಯಕಾರಿ ತ್ಯಾಜ್ಯ ತುಂಬಿರುವ ವಾಹನಗಳು ಮತ್ತು ಐಓಸಿಲ್‌ನ ಅನಿಲ ತುಂಬಿರುವ ವಾಹನಗಳು ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಮುಖ್ಯ ರಸ್ತೆಯನ್ನು ಬಳಸಿಕೊಳ್ಳುತ್ತಿರುವುದರಿಂದ ತೊಂದರೆಯಾಗುತ್ತಿದೆ. ಗಾರ್ಮೆಂಟ್ಸ್ ನ ವಾಯುಮಾಲಿನ್ಯ ಮತ್ತು ಜಲ ಮಾಲಿನ್ಯ ನಿಯಂತ್ರಿಸಲು ಕ್ರಮ ವಹಿಸಬೇಕು. ಹಾಗೂ ಜಿಟಿಟಿಸಿ ಆವರಣದ ಮುಂದೆ ಮತ್ತು ಇಲ್ಲಿರುವ ಕ್ಯಾಂಟಿನ್ ಬಳಿ ಐಓಸಿಲ್‌ನ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಇದನ್ನು ನಿಯಂತ್ರಿಸಬೇಕೆಂದು ಎಂದರು.

Edited By : Abhishek Kamoji
Kshetra Samachara

Kshetra Samachara

05/02/2025 04:04 pm

Cinque Terre

2.5 K

Cinque Terre

0

ಸಂಬಂಧಿತ ಸುದ್ದಿ