", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/416809_1738752366_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SantoshHassan" }, "editor": { "@type": "Person", "name": "8749017705" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾಸನ: ಕಳೆದ ಏಳು ತಿಂಗಳಿನಿಂದ ವೇತನ ನೀಡಿಲ್ಲ ಎಂದು ಆರೋಪಿಸಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು ನಗರದ ಸಲಗಾಮೆ ರಸ್ತೆ...Read more" } ", "keywords": "Node,Hassan,News", "url": "https://publicnext.com/node" }
ಹಾಸನ: ಕಳೆದ ಏಳು ತಿಂಗಳಿನಿಂದ ವೇತನ ನೀಡಿಲ್ಲ ಎಂದು ಆರೋಪಿಸಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು ನಗರದ ಸಲಗಾಮೆ ರಸ್ತೆಯಲ್ಲಿನ D.H.O ಕಛೇರಿ ಎದುರು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಕಾರರು, ಜಿಲ್ಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಕೀಯ ಸಿಬ್ಬಂದಿಗಳಿಗೆ ಕಳೆದ ನಾಲ್ಕೈದು ತಿಂಗಳಿನಿಂದ ವೇತನ ನೀಡಿಲ್ಲ, ಇದರಿಂದ ತಮ್ಮ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಈ ಬಗ್ಗೆ ಸಂಭಂದಿಸಿದ ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರು ಈ ವರೆಗೆ ನಮಗೆ ವೇತನ ನೀಡಿಲ್ಲ ಎಂದರು.
ಗ್ರಾಮೀಣ ಪ್ರದೇಶದ ಆರೋಗ್ಯ ಕೇಂದ್ರಗಳಲ್ಲಿ ಕೆಲಸ ಮಾಡಲು ಹಿಂದೇಟು ಹಾಕುವ ಸಂದರ್ಭದಲ್ಲಿ ನಾವು ಎಲ್ಲಾ ಸಮಸ್ಯೆಗಳನ್ನು ಎದುರಿಸಿ ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ ಆದರೆ. ನಮ್ಮ ಸೇವೆಯನ್ನು ಕಡೆಗಣಿಸಲಾಗುತ್ತಿದೆ ಎಂದರು.
ಕೂಡಲೇ ಸಂಭಂದಿಸಿದ ಇಲಾಖೆ ಸಚಿವರು ಹಾಗೂ ಜನಪ್ರತಿನಿಧಿಗಳು ನಮಗೆ ವೇತನ ಕೊಡಿಸುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಇಲ್ಲವಾದರೆ ವೆತನ ನೀಡುವವರೆಗೂ ವೈದ್ಯಕೀಯ ಸೇವೆ ಬಹಿಷ್ಕರಿಸಿ ನಿರಂತರ ಪ್ರತಿಭಟನೆ ನಡೆಸಲಾಗುವುದು ಎಂದರು.
Kshetra Samachara
05/02/2025 04:16 pm